Shivarajkumar; ಸಿದ್ದರಾಮಯ್ಯ ಪರ ಶಿವಣ್ಣ ಪ್ರಚಾರ; ಮುಗಿಬಿದ್ದ ಜನ
ಮೈಸೂರು; ಮಾಜಿ ಸಿದ್ದರಾಮಯ್ಯ ಪರವಾಗಿ ಸಿನಿಮಾ ನಟನಟಿಯರು ಪ್ರಚಾರಕ್ಕಿಳಿದಿದ್ದಾರೆ. ಇಂದು ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರದಲ್ಲಿ ರೋಡ್ ಶೋ ನಡೆಸಿದ್ದು, ಇದಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಸಾಥ್ ನೀಡಿದಾರೆ. ಶಿವರಾಜ್ ಕುಮಾರ್ ಅವರು ರೋಡ್ ಶೋನಲ್ಲಿ ಭಾಗವಹಿಸಿ ಸಿದ್ದರಾಮಯ್ಯ ಅವರ ಪರವಾಗಿ ಮತಯಾಚನೆ ಮಾಡಿದರು.
ಹಲವು ಹಳ್ಳಿಗಳಲ್ಲಿ ನಡೆದ ರೋಡ್ ಶೋನಲ್ಲಿ ಸಿದ್ದರಾಮಯ್ಯ ಅವರ ಜೊತೆ ಶಿವರಾಜ್‌ಕುಮಾರ್ ಪಾಲ್ಗೊಂಡಿದ್ದರು. ಈ ವೇಳೆ ಶಿವರಾಜ್‌ಕುಮಾರ್ ಅವರನ್ನು ನೋಡಲು ಜನರು ಮುಗಿಬಿದ್ದಿದ್ದರು. ಸಾವಿರಾರು ಜನರು ರೋಡ್ ಶೋನಲ್ಲಿ ಪಾಲ್ಗೊಂಡಿದ್ದರು.
ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಹಾಗೂ ನಟಿ ದುನಿಯಾ ವಿಜಿ ಕೂಡಾ ಸಿದ್ದರಾಮಯ್ಯ ಪರ ಪ್ರಚಾರ ನಡೆಸಲಿದ್ದಾರೆ.