ತುಮಕೂರು; ತುಮಕೂರಿನಲ್ಲಿ ಕೂಡಾ ಬಿರುಸಿನ ಮತದಾನ ನಡೆಯುತ್ತಿದೆ. ಮತದಾರರನ್ನು ಉತ್ತೇಜಿಸುವ ಸಲುವಾಗಿ ಹಿರಿಯರು, ಪ್ರಮುಖರು ಬೆಳಗ್ಗೆಯೇ ಮತಗಟ್ಟೆಗೆ ಬಂದು ಮತದಾನ ಮಾಡುತ್ತಿದ್ದಾರೆ.
ಇಂದು ಬೆಳಗ್ಗೆ ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಮತದಾನ ಮಾಡಿದ್ದಾರೆ. ತುಮಕೂರಿನ ಕ್ಯಾತ್ಸಂದ್ರದ ಮತಗಟ್ಟೆಯಲ್ಲಿ ಮತದಾನ ಮಾಡಿದರು.