Districts

ಘಟನೆ ಬಗ್ಗೆ ಮಾಹಿತಿ ಪಡೆದ ಸಿದ್ದರಾಮಯ್ಯ

ಬೆಳಗಾವಿ: ಅನಗೋಳದ ಕನಕದಾಸ ಕಾಲೊನಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಭೇಟಿ ನೀಡಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನಗೊಳಿಸಿರುವ ಘಟನೆ ಬಗ್ಗೆ ಮಾಹಿತಿ ಪಡೆದರು. ಈ ವೇಳೆ ಮಾತನಾಡಿ, ಪ್ರತಿಮೆ ಭಗ್ನಗೊಳಿಸಿರುವ ಘಟನೆ ಖಂಡನೀಯ. ಈ ಬಗ್ಗೆ ವಿಧಾನಮಂಡಲ ಅಧಿವೇಶನದಲ್ಲಿ ಚರ್ಚಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು. ರಾಯಣ್ಣ ಒಂದು ಜಾತಿಗೆ ಸೀಮಿತರಾದವರಲ್ಲ. ಕಿಡಿಗೇಡಿಗಳು ಭಗ್ನಗೊಳಿಸಿದ ಪ್ರತಿಮೆಯನ್ನು ಪೊಲೀಸರು ಸರಿಪಡಿಸಿದ್ದಾರೆ. ಕೂಡಲೇ ಆರೋಪಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.
ಇನ್ನು ಎಂಇಎಸ್‌ ವಿರುದ್ಧ ಕನ್ನಡ ಸಂಘಟನೆಗಳು ಪ್ರತಿಭಟನೆ ಮಾಡುತ್ತಿರುವ ಕುರಿತು ಸಿದ್ದರಾಮಯ್ಯ ಮಾತನಾಡಿ, ಯಾರಿಗೆ ಅನ್ಯಾಯವಾದರೂ ಪ್ರತಿಭಟನೆ ಮಾಡುವ ಹಕ್ಕಿದೆ. ಹೀಗಾಗಿ ಕನ್ನಡ ಸಂಘಟನೆಗಳಿಗೆ ಪ್ರತಿಭಟನೆ ಮಾಡುವ ಅವಕಾಶ ಕಲ್ಪಿಸಬೇಕು ಎಂದರು.
ನಗರದಲ್ಲಿ ಕಿಡಿಗೇಡಿಗಳು ಆಯುಧಗಳನ್ನು ಹಿಡಿದುಕೊಂಡು ಓಡಾಡುತ್ತಿದ್ದಾರೆ. ಇಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ. ಇವರಿಗೆ ಯಾರ ಭಯವಿಲ್ಲವೆಂದು ಅರ್ಥವಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈಗಾಗಲೇ ಕರವೇ ಕಾರ್ಯರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಎಂಇಎಸ್‌ ಪುಂಡರನ್ನು ಗಡಿಪಾರು ಮಾಡಲು ಪ್ರತಿಭಟನಾಕಾರರು ಆಗ್ರಹಿಸಿದರು.

 

Share Post