Districts

ಪಾದಯಾತ್ರೆಯಲ್ಲಿ ಪಾಲ್ಗೊಳ್ಳುತ್ತೇನೆ; ವಿಪಕ್ಷ ನಾಯಕ ಸಿದ್ದರಾಮಯ್ಯ

ಮೈಸೂರು: ಮೇಕೆದಾಟು ಯೋಜನೆ ಶೀಘ್ರ ಜಾರಿಗಾಗಿ ಜನವರಿ ಮೊದಲ ವಾರದಲ್ಲಿ ಕೆಪಿಸಿಸಿ ಹಮ್ಮಿಕೊಂಡಿರುವ ಪಾದಯಾತ್ರೆಯಲ್ಲಿ ನಾನೂ ಪಾಲ್ಗೊಳ್ಳುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್‌ ಹಾಗೂ ನನ್ನ ನಡುವೆ ಅನ್ಯೋನ್ಯತೆ ಇದೆ. ನಾವು ಆರಾಮಾಗಿದ್ದೇನೆ. ಆದರೆ ಕೆಲವರು, ನಮಗಿಬ್ಬರಿಗೂ ಆಗೋದಿಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಮೇಕೆದಾಟು ಯೋಜನೆಗಾಗಿ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಬೆಂಗಳೂರಿನಿಂದ ಮೇಕೆದಾಟುವರೆಗೆ ಪಾದಯಾತ್ರೆ ನಡೆಯಲಿದೆ. ಅದರಲ್ಲಿ ನಾನು ಭಾಗವಹಿಸುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನು ಸಿದ್ದರಾಮಯ್ಯ ಅವಧಿಯಲ್ಲೇ ಹೆಚ್ಚು ಸಾಲ ಮಾಡಲಾಗಿದೆ ಎಂದು ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, ಆದಾಯಕ್ಕಿಂತ ಖರ್ಚು ಹೆಚ್ಚಾಗಿರಬಹುದು. ಆದರೆ ರಾಜ್ಯದ ಆರ್ಥಿಕತೆ ಉತ್ತಮವಾಗಿರುವ ಮೂರು ಮಾನದಂಡಗಳಿವೆ. ಅದನ್ನು ನಾನು ಪಾಲಿಸಿದ್ದೇನೆ ಎಂದು ಹೇಳಿದ್ದಾರೆ.

 

Share Post