ಸ್ವಾಮೀಜಿ ತಲೆ ಮೇಲೆ ಬಟ್ಟೆ ಹಾಕೋದಿಲ್ವಾ..?; ಮತ್ತೆ ಹಿಜಾಬ್ ವಿವಾದ ಕೆದಕಿದ ಸಿದ್ದರಾಮಯ್ಯ
ಮೈಸೂರು: ಕೋರ್ಟ್ ಆದೇಶದ ನಂತರ ಹಿಜಾಬ್ ವಿವಾದ ತಣ್ಣಗಾಗಿತ್ತು. ಇದೀಗ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ವಿವಾದಿತ ಹೇಳಿಕೆ ನೀಡುವ ಮೂಲಕ ವಿವಾದ ಮತ್ತೆ ಚರ್ಚೆಯಾಗುವಂತೆ ಮಾಡಿದ್ದಾರೆ. ಇಂದು ಮೈಸೂರಿನಲ್ಲಿ ಮಾತನಾಡಿದ ಅವರು, ಸ್ವಾಮೀಜಿಗಳು ಕೂಡಾ ತಲೆ ಮೇಲೆ ಬಟ್ಟೆ ಹಾಕಿಕೊಳ್ಳುತ್ತಾರೆ. ಸ್ವಾಮೀಜಿಗಳನ್ನು ಯಾರಾದರೂ ಪ್ರಶ್ನೆ ಮಾಡಿದ್ದೀರಾ..? ಎಂದು ಕೇಳುವ ಮೂಲಕ ಸಿದ್ದರಾಮಯ್ಯ ಹಿಜಾಬ್ ವಿವಾದವನ್ನು ಮತ್ತೆ ಮುನ್ನೆಲೆಗೆ ತಂದಿದ್ದಾರೆ.
ಹಿಂದೂ ಹೆಣ್ಣು ಮಕ್ಕಳು ಕೂಡಾ ತಲೆ ಮೇಲೆ ಬಟ್ಟೆ ಹಾಕಿಕೊಳ್ಳುತ್ತಾರೆ. ಸ್ವಾಮೀಜಿಗಳು ಕೂಡಾ ತಲೆ ಮೇಲೆ ಬಟ್ಟೆ ಹಾಕುತ್ತಾರೆ. ಹಾಗಾದ್ಮೇಲೆ ಮುಸ್ಲಿಂ ಹೆಣ್ಣು ಮಕ್ಕಳು ತಲೆ ಮೇಲೆ ದುಪ್ಪಟ್ಟಾ ಹಾಕಿಕೊಂಡರೇ ತಪ್ಪೇನು ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. ಈ ಮೂಲಕ ವಿವಾದಕ್ಕೆ ಕಾರಣರಾಗಿದ್ದಾರೆ.