Districts

ಸಿದ್ದೇಶ್ವರ ಶ್ರೀಗಳ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ

ವಿಜಯಪುರ; ಸಿದ್ದೇಶ್ವರ ಸ್ವಾಮೀಜಿ ಅನಾರೋಗ್ಯದ ಹಿನ್ನೆಲೆಯಲ್ಲಿ ವಿವಿಧ ಗಣ್ಯರು ಅವರನ್ನು ಭೇಟಿ ಮಾಡುತ್ತಿದ್ದಾರೆ. ನಿನ್ನೆ ಸಿಎಂ ಬೊಮ್ಮಾಯಿಯವರು ಶ್ರೀಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದರು. ಇಂದು ವಿಧಾನಸಭೆ ವಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರು ವಿಜಯಪುರದಲ್ಲಿ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ಶಾಸಕರಾದ ಶಿವಾನಂದ ಪಾಟೀಲ್, ಯಶವಂತರಾಯಗೌಡ ಪಾಟೀಲ್, ಪ್ರಕಾಶ್ ರಾಥೋಡ್, ಪ್ರಕಾಶ್ ಹುಕ್ಕೇರಿ ಹಾಜರಿದ್ದರು.

Share Post