DistrictsPolitics

ರಾಜ್ಯದಲ್ಲಿ ಪಿಎಫ್‌ಐ, ಎಸ್‌ಡಿಪಿಐ ಬೆಳೆಯಲು ಸಿದ್ದರಾಮಯ್ಯ ಕಾರಣ; ಕಟೀಲ್‌

ವಿಜಯಪುರ; ಪಿಎಫ್‌ಐ ಹಾಗೂ ಎಸ್‌ಡಿಪಿಐ ರಾಜ್ಯದಲ್ಲಿ ಬೆಳೆಯಲು ಸಿದ್ದರಾಮಯ್ಯ ಅವರೇ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಗಂಭೀರ ಆರೋಪ ಮಾಡಿದ್ದಾರೆ.  ವಿಜಯಪುರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವಧಿಯಲ್ಲೇ ದೇಶ ವಿರೋಧಿ ಸಂಘಟನೆಗಳು ಬೆಳೆದಿವೆ. ನಮ್ಮ ಸರ್ಕಾರ ಈಗ ಗಟ್ಟಿ ನಿರ್ಧಾರ ತೆಗೆದುಕೊಂಡಿದೆ ಎಂದರು.

ಮಾಜಿ ಸಿಎಂ ಸಿದ್ದರಾಮಯ್ಯರಿಂದಲೇ ಪರಿಸ್ಥಿತಿ ಗಂಭೀರವಾಗಿದೆ. ಹೀಗಾಗಿ, ದೇಶಾದ್ಯಂತ ರಾಷ್ಟ್ರೀಯ ತನಿಖಾ ದಳ ದಾಳಿ ನಡೆಸಿದೆ. ಅತಿ ಹೆಚ್ಚು ನಮ್ಮ ರಾಜ್ಯದವರನ್ನೇ ಬಂಧಿಸಿದ್ದಾರೆ ಎಂದರು.

ಪಿಎಫ್‍ಐ ನಿಷೇಧಕ್ಕೆ ದೇಶಭಕ್ತರ ಬೇಡಿಕೆ ಇದೆ. ಅದಕ್ಕೆ ಸಾಕ್ಷ್ಯಾಧಾರಗಳ ಸಂಗ್ರಹ ನಡೆಯುತ್ತಿದೆ. ನಮ್ಮ ಸರ್ಕಾರ ಕಟ್ಟುನಿಟ್ಟಿನ ಕ್ರಮದ ಜೊತೆಗೆ ಗಟ್ಟಿ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ನಳಿನ್‌ ಕುಮಾರ್‌ ಕಟೀಲ್‌ ವಿಶ್ವಾಸ ವ್ಯಕ್ತಪಡಿಸಿದರು.

Share Post