Districts

ಸ್ವಾಮೀಜಿಗಳ ವಸ್ತ್ರದ ಬಗ್ಗೆ ಸಿದ್ದರಾಮಯ್ಯ ಹೇಳಿಕೆಗೆ ತೀವ್ರ ಟೀಕೆ: ಇಂದು ಸ್ಪಷ್ಟನೆ ಸಾಧ್ಯತೆ

ಮೈಸೂರು: ಹಿಜಾಬ್‌ ವಿಚಾರಕ್ಕೆ ಸಂಬಂಧಿಸಿದಂತೆ ಸ್ವಾಮೀಜಿಗಳು ತಲೆಮೇಲೆ ಬಟ್ಟೆ ಹಾಕ್ತಾರೆ ಎಂಬ ವಿಚಾರವನ್ನು ಉದಾಹರಣೆ ನೀಡಿದ ಬೆನ್ನಲ್ಲೇ ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ. ರಾಜ್ಯಾದ್ಯಂತ ಹಲವು ಸ್ವಾಮೀಜಿಗಳು ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದರು. ಈ ಹಿನ್ನೆಲೆಯಲ್ಲಿ ಟ್ವೀಟ್‌ ಮಾಡಿ ತಮ್ಮ ಹೇಳಿಕೆಯನ್ನು ತಿರುಚಲಾಗಿದೆ ಎಂಬ ವಿಚಾರವ್ನು ಹೇಳಿದ್ರು.

ನಮ್ಮ ತಾಯಂದಿರು ಸೇರಿದಂತೆ ಸಾಮಾನ್ಯವಾಗಿ ಎಲ್ಲರೂ ತಲೆಮೇಲೆ ಬಟ್ಟೆ ಹಾಕಿಕೊಳ್ಳುತ್ತಾರೆ ಎಂದು ಹೇಳಿದ್ದೆನೆಯೇ ಹೊರತು ಸ್ವಾಮೀಜಿಗಳಿಗೆ ಅವಮಾನ ಮಾಡಿಲ್ಲ, ಅಗೌರವ ತೋರಿಲ್ಲ. ಅನಗತ್ಯವಾಗಿ ನನ್ನ ಹೇಳಿಕೆಯನ್ನು ತಿರುಚಲಾಗಿದೆ. ಸರ್ವ ಜಾತಿಗಳ ಸ್ವಾಮೀಜಿಗಳ ಬಗ್ಗೆ ನನಗೆ ಗೌರವವಿದೆ, ದೀರ್ಘಕಾಲದಿಂದ ನನಗೆ ಅವರ ಜೊತೆ ಹಾರ್ದಿಕ ಸಂಬಂಧ ಇದೆ. ಯಾವ ಸ್ವಾಮೀಜಿಗಳ ಬಗ್ಗೆಯೂ, ಯಾವಾಗಲೂ ನಾನು ಅಗೌರವದಿಂದ ನಡೆದುಕೊಂಡಿಲ್ಲ‌ ಎನ್ನುವುದು ರಾಜ್ಯದ ಜನತೆಗೆ ಗೊತ್ತಿದೆ.

ರಾಜಕೀಯ ವಿರೋಧಿಗಳು ದುರುದ್ದೇಶದಿಂದ ನನ್ನ ಹೇಳಿಕೆಯನ್ನು ತಿರುಚಿ ಅಪಪ್ರಚಾರ ಮಾಡುತ್ತಿದ್ದಾರೆ. ಇದಕ್ಕೆ ಕೆಲವು ಮಾಧ್ಯಮಗಳು‌ ಕೂಡಾ ಸಾಥ್ ನೀಡಿರುವುದು‌ ವಿಷಾದನೀಯ ಬೆಳವಣಿಗೆ. ನನ್ನ ಹೇಳಿಕೆಯನ್ನು ತಿರುಚಿರುವುದು ರಾಜ್ಯದ ಪ್ರಮುಖ ಮಠಗಳ ಹಿರಿಯ ಸ್ವಾಮೀಜಿಗಳಿಗೆ ಅರ್ಥವಾಗಿರುವ ಕಾರಣಕ್ಕಾಗಿಯೇ ಅವರು ಮೌನವಾಗಿದ್ದಾರೆ. ಅವರೆಲ್ಲರಿಗೂ ನನ್ನ ಕೃತಜ್ಞತಾಪೂರ್ವಕ ನಮನಗಳನ್ನು ಸಲ್ಲಿಸಿದ್ದಾರೆ.

ಮೈಸೂರಿನಲ್ಲಿ ಇಂದು ಸ್ಪಷ್ಟನೆ ಸಾಧ್ಯತೆ

ಮೈಸೂರಿನ ಪ್ರವಾಸದಲ್ಲಿರುವ ಸಿದ್ದರಾಮಯ್ಯ ಇಂದು ಕೂಡ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಹುಣಸೂರಿನ ನೂತನ ಕಾವೇರಿ ಆಸ್ಪತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ನೆರವೇರಿಸಲಿದ್ದಾರೆ. ಬಳಿಕ ಸಂಜೆ ಮಾನಸ ಗಂಗೋತ್ರಿ ವಿಜ್ಞಾನ ಭವನದಲ್ಲಿ ಪ್ರೊ.ಭಗವಾನ್‌ ಅವರ ಪುಸ್ತಕಗಳನ್ನು ಬಿಡುಗಡೆ ಮಾಡಲಿದ್ದಾರೆ.

ಈ ಕಾರ್ಯಕ್ರಮಗಳಲ್ಲಿ ನಿನ್ನೆ ಹಿಜಾಬ್‌ ವಿಚಾರಕ್ಕೆ ಸಂಬಂಧಿಸಿದಂತೆ ನೀಡಿದ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡುವ ಎಲ್ಲಾ ಸಾಧ್ಯತೆಗಳೂ ಇವೆ. ಯಾಕಂದ್ರೆ ಸಿದ್ದರಾಮಯ್ಯ ಹೇಳಿಕೆ ನೀಡುತ್ತಿದ್ದಂತೆ ಹಲವಾರು ಸ್ವಾಮೀಜಿಗಳು, ಬಿಜೆಪಿ ನಾಯಕರು ತಿರುಗಿಬಿದ್ದಿದ್ರು, ಇದರ ಜೊತೆಗೆ ಸ್ವಪಕ್ಷದವರೇ ಆದ ಕಾಂಗ್ರೆಸ್‌ ನಾಯಕರೂ ಯಾರೂ ಸಿದ್ದರಾಮಯ್ಯ ಹೇಳಿಕೆಗೆ ಸ್ಪಂದಿಸದೆ ಅಂತರ ಕಾಯ್ದುಕೊಂಡರು ಇದೆಲ್ಲದರ ಬೆಳವಣಿಗೆಗಳಿಂದ ಇಂದು ಸಿದ್ದರಾಮಯ್ಯ ಸ್ಪಷ್ಟನೆ ನೀಡುವ ಸಾಧ್ಯತೆಯಿದೆ.

Share Post