ಡಿ.ಕೆ.ಶಿವಕುಮಾರ್ ಹಾಗೂ ನನ್ನ ನಡುವೆ ಬಿರುಕಿಲ್ಲ; ಸಿದ್ದರಾಮಯ್ಯ
ದಾವಣಗೆರೆ; ಡಿಕೆಶಿ, ಸಿದ್ದರಾಮಯ್ಯ ನಡುವೆ ಬಿರುಕು ಇದೆ ಎಂದು ಬಿಂಬಿಸುತ್ತಿದ್ದಾರೆ. ನಮ್ಮಿಬ್ಬರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಾವಿಬ್ಬರೂ ಒಂದಾಗಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 75ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ನಮ್ಮಿನ್ನರ ನಡುವೆ ಬಿರುಕು ಎಂಬುದು ಬಿಜೆಪಿ ಹಾಗೂ ಮಾಧ್ಯಮಗಳ ಸೃಷ್ಟಿ ಎಂದರು.
ನಾನು ಈ ಹಿಂದೆ ಎಂದೂ ಹುಟ್ಟು ಹಬ್ಬ ಆಚರಿಸಿಕೊಂಡಿರಲಿಲ್ಲ. ಹಿತೈಷಿಗಳ ಒತ್ತಾಯದ ಮೇರೆಗೆ ಈ ಹುಟ್ಟುಹಬ್ಬ ಆಚರಣೆಗೆ ಒಪ್ಪಿಕೊಂಡೆ. ಕಾರ್ಯಕ್ರಮಕ್ಕೆ ಬಂದಿದ್ದಕ್ಕೆ ರಾಹುಲ್ ಗಾಂಧಿಯವರಿಗೆ ಕೋಟಿ ಕೋಟಿ ನಮನ. ನನ್ನ ಮೇಲೆ ರಾಹುಲ್ ಗಾಂಧಿ ವಿಶೇಷ ಪ್ರೀತಿ ಇಟ್ಟುಕೊಂಡಿದ್ದಾರೆ. ನಾನು ಸಿಎಂ ಆಗಲು ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಕಾರಣ ಎಂದು ಸಿದ್ದರಾಮಯ್ಯ ನೆನಪಿಸಿಕೊಂಡರು.
ರಾಜ್ಯದಲ್ಲಿ ಹಾಗೂ ದೇಶದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುತ್ತದೆ. ಬಿಜೆಪಿಯನ್ನು ಜನರು ಧೂಳೀಪಟ ಮಾಡುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ಸಿದ್ದರಾಮಯ್ಯ ಹೇಳಿದರು.