ಚಂದ್ರು ಕೊಲೆ ಪ್ರಕರಣ; ಬಿಜೆಪಿಯವರು ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತಿದ್ದಾರೆ; ಸಿದ್ದರಾಮಯ್ಯ
ಬೆಂಗಳೂರು: ಗೋರಿಪಾಳ್ಯದಲ್ಲಿ ಚಂದ್ರು ಎಂಬ ಯುವಕನ ಕೊಲೆ ಪ್ರಕರಣದಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರ ಏನು ಹೇಳಿದ್ದಾರೆ ಎಂಬುದು ನನಗೆ ಅರಿವಿದೆ. ಇಂತಹವರು ಗೃಹಸಚಿವರಾಗಿರುವುದು ನಮ್ಮ ದೌರ್ಭಾಗ್ಯ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಸಮಾಜದ ಸ್ವಾಸ್ಥ್ಯ ಹಾಳು ಮಾಡಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ. ಇದನ್ನು ಮುಚ್ಚಿಹಾಕಲ ಏನೇನೋ ತಂತ್ರ ಬಳಸುತ್ತಿದ್ದಾರೆ. ಭಾವನಾತ್ಮಕ ವಿಚಾರಗಳನ್ನು ಕೆದಕುವ ಮೂಲಕ ಸಮಾಜದ ನೆಮ್ಮದಿ ಹಾಳು ಮಾಡಲು ಹೊರಟಿದ್ದಾರೆ ಎಂದು ಸಿದ್ದರಾಮಯ್ಯ ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.