Districts

ಟ್ವೀಟ್‌ ಮೂಲಕ ಸಿದ್ದರಾಮಯ್ಯ ಆಕ್ರೋಶ

ಬೆಳಗಾವಿ: ಎಂಇಎಸ್‌ ಪುಂಡರು ಹಾವಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮೂಲಕ ಆಕ್ರೋಶ ಹಾಕಿದ್ದಾರೆ. ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಕೆಡವಿ, ವಿರೂಪಗೊಳಿಸಿದ ಕೃತ್ಯ ಖಂಡನೀಯ. ಕಿಡಿಗೇಡಿಗಳನ್ನು ಜೈಲಿಗಟ್ಟಿ, ಆರೋಪಿಗಳನ್ನು ಬಂಧಿಸುವಂತೆ ಮನವಿ ಮಾಡಿದರು.

ಕಳೆದ ರಾತ್ರಿ ಎಂಇಎಸ್‌ ಪುಂಡರು, ವಾಹನಗಳು ಹಾಗೂ ಕಟ್ಟಡಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಅಲ್ಲದೆ, ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನಗೊಳಿಸಿದ್ದರು. ಎಂಇಎಸ್‌ ಪುಂಡಾಟಿಕೆ ವಿರುದ್ಧ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಪೊಲೀಸರು ಕೆಲವರು ಆರೋಪಿಗಳನ್ನು ಬಂಧಿಸಿದ್ದಾರೆ. ಆದರೆ ಇನ್ನೂ ಪ್ರಮುಖ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಅವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಇನ್ನು ಎಂಇಎಸ್‌ ಪುಂಡಾಟಿಕೆಗೆ ಪಕ್ಷಾತೀತವಾಗಿ ಖಂಡನೆ ವ್ಯಕ್ತವಾಗುತ್ತಿದೆ.

ಮಾಜಿ ಸಿಎಂ ಸಿದ್ದರಾಮಯ್ಯ, ಈ ಬಗ್ಗೆ ಟ್ವೀಟ್‌ ಮಾಡಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಇತ್ತ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಕೂಡಾ ಘಟನೆಯನ್ನು ಖಂಡಿಸಿದ್ದಾರೆ. ಕರ್ನಾಟಕದಲ್ಲಿರುವವರೆಲ್ಲರೂ ಕನ್ನಡಿಗರೇ. ಇಲ್ಲಿ ಯಾರೂ ಭಾಷೆ, ನಾಡು ನುಡಿ ಹೆಸರಲ್ಲಿ ಪುಂಡಾಟಿಕೆ ಮಾಡಬಾರದು. ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಡಿ.ಕೆ.ಶಿವಕುಮಾರ್‌ ಆಗ್ರಹಿಸಿದ್ದಾರೆ.

 

Share Post