DistrictsPolitics

ಯಾರಾದರೂ ಸಿಎಂ ಆಗಿ, ಆದ್ರೆ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಬೇಕು ಅಷ್ಟೇ; ಮಲ್ಲಿಕಾರ್ಜುನ ಖರ್ಗೆ

ಕೋಲಾರ; ಯಾರಾದರೂ ಮುಖ್ಯಮಂತ್ರಿಯಾಗಿ, ನಾನು ತಲೆಕೆಡಿಸಿಕೊಳ್ಳುವುದಿಲ್ಲ. ಆದ್ರೆ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಕೋಲಾರದಲ್ಲಿ ನಡೆಯುತ್ತಿರುವ ಜೈ ಭಾರತ್‌ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. ಸಿಎಂ ನ್ನು ಆಯ್ಕೆಯಾದ ಶಾಸಕರು, ಹೈಕಮಾಂಡ್‌ ಆಯ್ಕೆ ಮಾಡುತ್ತೆ. ಹೀಗಾಗಿ ಈಗ ಯಾರೂ ಆ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ. ಬದಲಾಗಿ ಪಕ್ಷವನ್ನು ಅಧಿಕಾರಕ್ಕೆ ತರುವುದರ ಕಡೆ ಗಮನ ಕೊಡಿ ಎಂದು ನಾಯಕರಿಗೆ ಖರ್ಗೆ ಕಿವಿಮಾತು ಹೇಳಿದರು.

ರಾಹುಲ್‌ ಗಾಂಧಿಯವರು ನಾಲ್ಕು ಸಾವಿರ ಕಿಲೋ ಮೀಟರ್‌ ಭಾರತ್‌ ಜೋಡೋ ಯಾತ್ರೆ ನಡೆಸಿ ವಿಶ್ವದ ಗಮನ ಸೆಳೆದಿದ್ದಾರೆ. ಇಂದು ಕೇಂದ್ರದಲ್ಲಿ ಬಿಜೆಪಿ ವಿರುದ್ಧ ಸಮರ್ಥವಾಗಿ ಧ್ವನಿ ಎತ್ತುವವರಿದ್ದರೆ ಅದು ರಾಹುಲ್‌ ಗಾಂಧಿ ಮಾತ್ರ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ. 40 ಪರ್ಸೆಂಟ್​ ಸರ್ಕಾರಕ್ಕೆ ರಾಜ್ಯದ ಜನರು ಬೇಸತ್ತು ಹೋಗಿದ್ದಾರೆ ಎಂದು ಹೇಳಿದರು.

ಮೋದಿ ಸರ್ಕಾರದ ವಿರುದ್ಧ ಜನ ಬೇಸತ್ತಿದ್ದಾರೆ. ಅದಕ್ಕಿಂತ ಹೆಚ್ಚು ರಾಜ್ಯದ ನಲವತ್ತು ಪರ್ಸೆಂಟ್‌ ಸರ್ಕಾರದಿಂದ ಬೇಸತ್ತಿದ್ದಾರೆ. ರಾಜ್ಯದಲ್ಲಿರೋದು ಅತ್ಯಂತ್‌ ಭ್ರಷ್ಟ ಸರ್ಕಾರ. ಮೋದಿ, ಶಾ ಕಾಂಗ್ರೆಸ್‌ ವಿರುದ್ಧ ಮಾತನಾಡುತ್ತಾರೆ. ಅವರೇ ಭ್ರಷ್ಟ ಸರ್ಕಾರವನ್ನು ಸಹಿಸಿಕೊಳ್ಳುತ್ತಾರೆ. ಈ ಡಬಲ್‌ ಎಂಜಿನ್‌ ಸರ್ಕಾರ ಕರ್ನಾಟಕಕ್ಕೆ ಏನು ಕೊಟ್ಟಿದೆ ಎಂದು ಪ್ರಶ್ನೆ ಮಾಡಿದರು.

 

Share Post