Districts

ಉತ್ತರ ಕರ್ನಾಟಕದ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್‌ ಘೋಷಿಸಿ; ಬಸವ ಜಯ ಮೃತ್ಯುಂಜಯ ಸ್ವಾಮೀಜಿ

ಹಾವೇರಿ: ಉತ್ತರ ಕರ್ನಾಟಕ ಅಭಿವೃದ್ಧಿಯಲ್ಲಿ ಹಿಂದುಳಿದಿದೆ. ಹೀಗಾಗಿ ಕಲ್ಯಾಣ ಮತ್ತು ಕಿತ್ತೂರು ಕರ್ನಾಟಕಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರ ಪ್ರತ್ಯೇಕ ಆರ್ಥಿಕ ಪ್ಯಾಕೇಜ್‌ ಘೋಷಿಸಬೇಕು ಎಂದು ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಒತ್ತಾಯಿಸಿದರು. ಹಾವೇರಿಯಲ್ಲಿ ಮಾತನಾಡಿದ ಅವರು, ಕಲ್ಯಾಣ ಹಾಗೂ ಕಿತ್ತೂರು ಕರ್ನಾಟಕ ಭಾಗದ ಅಭಿವೃದ್ಧಿ ಸರ್ಕಾರ ಶ್ರಮಿಸಬೇಕಾದ ಅಗತ್ಯತೆ ಇದೆ. ಇದಕ್ಕಾಗಿ ವಿಶೇಷ ಪ್ಯಾಕೇಜ್‌ ಘೋಷಿಸಬೇಕಿದೆ.

ಇದೇ ವೇಳೆ ಸಚಿವ ಉಮೇಶ್‌ ಕತ್ತಿ ಅವರ ಪ್ರತ್ಯೇಕ ರಾಜ್ಯದ ಬಗ್ಗೆ ಮಾತನಾಡಿದ ಶ್ರೀಗಳು, ನಾವೆಲ್ಲರೂ ಸುಮ್ಮನಿದ್ದೇವೆ ಎಂದು ತುಳಿಯುವ ಪ್ರಯತ್ನವನ್ನು ಮಾಡಬಾರದು. ಇದರಿಂದ ಆಕ್ರೋಶದ ಕಟ್ಟೆ ಯಾವಾಗ ಹೊಡೆಯುತ್ತದೋ ಗೊತ್ತಿಲ್ಲ. ಉಮೇಶ್‌ ಕತ್ತಿ ಅವರು ಪ್ರತ್ಯೇಕ ರಾಜ್ಯಕ್ಕೆ 10 ವರ್ಷಗಳಿಂದ ಧ್ವನಿ ಎತ್ತುತ್ತಿದ್ದಾರೆ. ಅಭಿವೃದ್ಧಿ ವಿಚಾರದಲ್ಲಿ ಸರ್ಕಾರಗಳು ಮಲತಾಯಿ ಧೋರಣೆ ಎತ್ತಿದಾಗ ಸಹಜವಾಗಿಯೇ ಪ್ರತ್ಯೇಕತೆಯ ಕೂಗು ಕೇಳಿಬರುತ್ತದೆ. ಆದರೆ, ಅಖಂಡ ಕರ್ನಾಟಕ ಉಳಿಯಬೇಕಾದರೆ, ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಮುಂದಾಗಬೇಕು. ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಕಚೇರಿಗಳು ಬರಬೇಕು, ಡಾ.ನಂಜುಂಡಪ್ಪ ವರದಿ ಅನುಷ್ಠಾನಗೊಳ್ಳಬೇಕು ಎಂದು ಒತ್ತಾಯಿಸಿದರು.

Share Post