ಪಾರಂಪರಿಕ ಕಟ್ಟಡಗಳ ರಕ್ಷಣೆಗೆ ಸರ್ಕಾರ ಬದ್ಧ; ಎಸ್.ಟಿ.ಸೋಮಶೇಖರ್
ಮೈಸೂರು; ನಿನ್ನೆ ಮೈಸೂರು ಮಹಾರಾಣಿ ಕಾಲೇಜಿನ ಕಟ್ಟಡ ಕುಸಿದುಬಿದ್ದಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರು ನಗರದಲ್ಲಿರುವ ಪಾರಂಪರಿಕ ಕಟ್ಟಡಗಳನ್ನು ರಕ್ಷಣೆ ಮಾಡಲಾಗುವುದು. ಸರ್ಕಾರದಿಂದ ಅದಕ್ಕೆ ಬೇಕಾದ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಸಚಿವರು, ಈ ವರ್ಷ ನಿರೀಕ್ಷೆಗೂ ಮೀರಿ ಮಳೆಯಾಗುತ್ತಿದೆ. ಅದರಲ್ಲೂ ಮೈಸೂರು ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಹೀಗಾಗಿ ಹಳೆ ಕಟ್ಟಡಗಳಿಗೆ ಹಾನಿಯಾಗುತ್ತಿದೆ. ಎಲ್ಲೆಲ್ಲಿ ಸಮಸ್ಯೆ ಇದೆಯೋ ಅದರ ಬಗ್ಗೆ ಮಾಹಿತಿ ಪಡೆದು, ಪಾರಂಪರಿಕ ಕಟ್ಟಡಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಅವರು ಹೇಳಿದರು.