ಹುಬ್ಬಳ್ಳಿಯಲ್ಲಿ PFI, SDPIನ ಹತ್ತು ಮುಖಂಡರ ಬಂಧನ
ಹುಬ್ಬಳ್ಳಿ ; ಇವತ್ತೂ ಕೂಡಾ ರಾಜ್ಯಾದ್ಯಂತ ಪಿಎಫ್ಐ ಹಾಗೂ ಎಸ್ಡಿಪಿಐ ಮುಖಂಡರ ಮನೆಗಳ ಮೇಲೆ ದಾಳಿ ಮುಂದುವರೆದಿದೆ. ಹಳೇ ಹುಬ್ಬಳ್ಳಿಯ ಕಸಬಾಪೇಟ್ ಮತ್ತು ಕಲಘಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೂಡಾ 10ಕ್ಕೂ ಹೆಚ್ಚು SDPI-PFI ಮುಖಂಡರನ್ನು ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಸಬಾಪೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಏಳು ಜನರನ್ನು ಬಂಧಿಸಲಾಗಿದೆ. ಕಲಘಟಗಿ ತಾಲೂಕಿನ ಮಿಶ್ರಿಕೋಟಿ ಗ್ರಾಮದ ಫಾರುಕ್, ಸಿಕಂದರ್ ಮತ್ತು ಹುಬ್ಬಳ್ಳಿ ತಾಲೂಕಿನ ಅದರಗುಂಚಿ ಗ್ರಾಮದ ಅಬ್ಬಾಸಲಿ ಮಂಟಗಣಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸಿಪಿಐ ರಮೇಶ್ ಗೋಕಾಕ್ ನೇತೃತ್ವದ ತಂಡದಿಂದ ಕಾರ್ಯಾಚರಣೆ ನಡೆಯುತ್ತಿದ್ದು, ಸಿಆರ್ಪಿಸಿ 107, 151 ಅಡಿ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.