Districts

ಹುಬ್ಬಳ್ಳಿ ಗಲಭೆ ಪ್ರಕರಣ; ಏಪ್ರಿಲ್‌ 23ರವರೆಗೆ ನಿಷೇಧಾಜ್ಞೆ ವಿಸ್ತರಣೆ

ಹುಬ್ಬಳ್ಳಿ; ಶನಿವಾರ ನಡೆದ ಹುಬ್ಬಳ್ಳಿಯ ಗಲಭೆ ಪ್ರಕರಣ ಸಂಬಂಧ ಹುಬ್ಬಳ್ಳಿಯಲ್ಲಿ ವಿಧಿಸಲಾಗಿದ್ದ ನಿಷೇಧಾಜ್ಞೆ ಮುಂದುವರೆಸಿ ಹು-ಧಾ ಅವಳಿ ನಗರ ಪೊಲೀಸ್ ಆಯುಕ್ತ ಲಾಬೂರಾಮ್ ಆದೇಶ ಹೊರಡಿಸಿದ್ದಾರೆ. ಏಪ್ರಿಲ್‌ 17ರ ರಾತ್ರಿ ನಡೆದಿದ್ದ ಗಲಭೆ ಹಿನ್ನೆಲೆಯಲ್ಲಿ ಏ‌ಪ್ರಿಲ್‌ 20ರ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಈಗ ಏಪ್ರಿಲ್‌ 23ರವರೆಗೆ ನಿಷೇಧಾಜ್ಞೆ ಮುಂದುವರಿಕೆ ಮಾಡಲಾಗಿದೆ.

ಹಳೆ ಹುಬ್ಬಳ್ಳಿ ಠಾಣೆ ಸೇರಿದಂತೆ ದಕ್ಷಿಣ ವಿಭಾಗದ ಐದು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಸ್ತರಿಸಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಲಾಬೂರಾಮ್ ಆದೇಶ ಹೊರಡಿಸಿದ್ದಾರೆ. ಹಳೆ ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಮೂರು ತಂಡಗಳನ್ನು ರಚಿಸಿ ಕಾರ್ಯಾಚರಣೆಗೆ ಇಳಿದ ಪೊಲೀಸರು ಈವರೆಗೆ 115 ಜನರನ್ನು ಬಂಧಿಸಲಾಗಿದೆ.

Share Post