CrimeDistricts

ವಿದ್ಯಾರ್ಥಿನಿಯನ್ನು ಅಪಹರಿಸಿ ಸ್ನೇಹಿತರಿಂದಲೇ ಅತ್ಯಾಚಾರ

ಬಳ್ಳಾರಿ; ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಯನ್ನು ಆಟೋದಲ್ಲಿ ಅಪಹರಿಸಿದ ನಾಲ್ವರು ಸ್ನೇಹಿತರು, ಆಕೆ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಈ ಸಂಬಂಧ ನಾಲ್ವರ ವಿರುದ್ಧ ಅತ್ಯಾಚಾರ ಕೇಸ್‌ ದಾಖಲು ಮಾಡಿಕೊಳ್ಳಲಾಗಿದೆ.

ವಿದ್ಯಾರ್ಥಿನಿ ಪರೀಕ್ಷೆ ಬರೆಯುತ್ತಿದ್ದಳು. ಈ ವೇಳೆ ಬಂದ ನಾಲ್ವರು ಸ್ನೇಹಿತರು ನಿಮ್ಮ ಅಣ್ಣ ಬಂದಿದ್ದಾನೆ ಎಂದು ಆಕೆಯನ್ನು ಹೊರಗೆ ಕರೆಸಿಕೊಂಡಿದ್ದಾರೆ. ನಂತರ ಆಕೆಯನ್ನು ಆಟೋದಲ್ಲಿ ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ಯಲಾಗಿದೆ. ನಂತರ ಆಕೆಗೆ ಬಿಯರ್‌ ಕುಡಿಸಿ ಸ್ನೇಹಿತನೊಬ್ಬ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಬಳ್ಳಾರಿ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

 

Share Post