CrimeDistricts

ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ; ಇಬ್ಬರು ವಿದ್ಯಾರ್ಥಿನಿಯರು ಪತ್ತೆ

ಹುಬ್ಬಳ್ಳಿ; ರಾಯಚೂರಿನಿಂದ ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿನಿಯರಲ್ಲಿ ಇಬ್ಬರು ಹುಬ್ಬಳ್ಳಿಯಲ್ಲಿ ಪತ್ತೆಯಾಗಿದ್ದಾರೆ. ಉಳಿದಿಬ್ಬರ ಬಗ್ಗೆ ಇನ್ನೂ ಮಾಹಿತಿ ಸಿಕ್ಕಿಲ್ಲ. 

ನಾಲ್ವರೂ ವಿದ್ಯಾರ್ಥಿನಿಯರು ರಾಯಚೂರು ನಗರದ ಸರ್ಕಾರಿ ಬಾಲಕಿಯರ ಕಾಲೇಜಿನ ವಿದ್ಯಾರ್ಥಿಗಳು. ಮೂವರು ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದರೆ, ಒಬ್ಬ ವಿದ್ಯಾರ್ಥಿನಿ ಪ್ರಥಮ ಪಿಯುಸಿಯಲ್ಲಿ ಓದುತ್ತಿದ್ದಾರೆ. ನಾಲ್ವರು ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದರು. ಇದೀನ ಇಬ್ಬರು ವಿದ್ಯಾರ್ಥಿನಿಯರು ಪತ್ತೆಯಾಗಿದ್ದಾರೆ. ಉಳಿದಿಬ್ಬರು ಎಲ್ಲಿಗೆ ಹೋಗಿದ್ದಾರೆ ಎಂಬುದು ಗೊತ್ತಾಗಿಲ್ಲ. ಅವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

ಇನ್ನು ಪತ್ತೆಯಾದ ಇಬ್ಬರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಯಾಕೆ ಮನೆ ಬಿಟ್ಟು ಬಂದಿರಿ..? ಯಾರು ಕರೆದುಕೊಂಡು ಬಂಧರು ಎಂಬುದರ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ.

Share Post