CrimeDistrictsPolitics

ವಿದ್ಯಾರ್ಥಿನಿ ವಿಡಿಯೋ ಪ್ರಕರಣ; ಪ್ರತಿಭಟನೆ ಮಾಡಿದ್ದ ವೀಣಾ ಶೆಟ್ಟಿ ವಿರುದ್ಧ ಎಫ್‌ಐಆರ್‌

ಉಡುಪಿ; ಉಡುಪಿಯ ಖಾಸಗಿ ಕಾಲೇಜು ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ ಸಂಬಂಧ ಪ್ರತಿಭಟನೆ ಮಾಡಿದ್ದ ಸ್ಥಳೀಯ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ ವಿರುದ್ಧ ಉಡುಪಿ ಠಾಣೆಯಲ್ಲಿ ಎಫ್‌ಐಆರ್‌ ದಾಖಲು ಮಾಡಲಾಗಿದೆ.

ಪ್ಯಾರಾ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯ ವಿಡಿಯೋ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕ್ರಮ ಆಗಬೇಕೆಂದು ಜುಲೈ 28ರಂದು ಪ್ರತಿಭಟನೆ ಮಾಡಲಾಗಿತ್ತು. ಬಿಜೆಪಿ ನೇತೃತ್ವದಲ್ಲಿ ನಡೆ ಈ ಪ್ರತಿಭಟನೆಯಲ್ಲಿ ವೀಣಾ ಶೆಟ್ಟಿಯವರು ಮಾತನಾಡಿದ್ದರು. ಈ ವೇಳೆ ಅವರು ಮುಸ್ಲಿಂ ಹುಡುಗಿಯರನ್ನು ಶಾಲಾಕಾಲೇಜಿಗೆ ಸೇರಿಸಬಾರದು, ಅವರನ್ನು ಮದರಸಾಗಳಿಗೆ ಸೇರಿಸಲು ಎಂದು ಪ್ರಚೋದನಾಕಾರಿ ಭಾಷಣ ಮಾಡಿದ್ದರು.

ವೀಣಾ ಶೆಟ್ಟಿಯರವ ಈ ಭಾಷಣದ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಇದಕ್ಕೆ ಹಲವರಿಂದ ವಿರೋಧ ಕೂಡಾ ವ್ಯಕ್ತವಾಗಿತ್ತು. ಈ ಹಿನ್ನೆಯಲ್ಲಿ ಉಡುಪಿ ಪೊಲೀಸರು ವೀಣಾ ಶೆಟ್ಟಿ ವಿರುದ್ಧ ಸುಮೋಟೋ ಕೇಸ್‌ ದಾಖಲಿಸಿಕೊ೦ಡಿದ್ದಾರೆ.

 

Share Post