CrimeDistricts

ಕರಾವಳಿಯಲ್ಲಿ ಮತ್ತೊಂದು ಕೊಲೆ; 4 ಠಾಣೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ

ಮಂಗಳೂರು; ಕರಾವಳಿಯಲ್ಲಿ ಮತ್ತೊಂದು ಬರ್ಬರ ಕೊಲೆ ನಡೆದಿದೆ. ಕಾರಿನಲ್ಲಿ ಬಂದಿದ್ದ ನಾಲ್ವರು ಮುಸುಕುಧಾರಿ ದುಷ್ಕರ್ಮಿಗಳು ಬಟ್ಟೆ ಅಂಗಡಿಗೆ ನುಗ್ಗಿ ಮಹಮ್ಮದ್ ಫಾಸಿಲ್(23) ಎಂಬಾತನನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಲೆ ಮಾಡಲಾಗಿದೆ. ಮಂಗಳೂರು ಬಳಿಯ ಸುರತ್ಕಲ್‍ನಲ್ಲಿ ಕಳೆದ ರಾತ್ರಿ ಈ ಕೃತ್ಯ ಎಸಗಲಾಗಿದೆ. ಗ್ಯಾಸ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಫಾಸಿಲ್ ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿದ್ದ. ಚಿಕಿತ್ಸೆ ಫಲಕಾರಿಯಾಗದೇ ಫಾಸಿಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.

ಸುರತ್ಕಲ್ ಕಾಟಿಪಳ್ಳ ಮಂಗಳಪೇಟೆ ನಿವಾಸಿ ಮಹಮ್ಮದ್ ಫಾಸಿಲ್‌ , ರಾತ್ರಿ 8 ಗಂಟೆ ಸುಮಾರಿಗೆ ಎಂಆರ್‍ಪಿಎಲ್ ರಸ್ತೆಯ ಸುರತ್ಕಲ್ ಮಾರುಕಟ್ಟೆ ಬಳಿಯ ಕಾಂಪ್ಲೆಕ್ಸ್‌ನಲ್ಲಿರುವ ಬಟ್ಟೆ ಅಂಗಡಿಗೆ ಹೋಗುದ್ದ ವೇಳೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಪರಾರಿಯಾಗಿದ್ದಾರೆ.

ಪ್ರವೀಣ್ ಹತ್ಯೆಯ ಬೆನ್ನಲ್ಲೆ ಮತ್ತೊಬ್ಬ ಯುವಕ ಫಾಸಿಲ್‌ನ ಹತ್ಯೆ ಆಗಿರುವ ಹಿನ್ನೆಲೆಯಲ್ಲಿ ಬಜ್ಬೆ, ಪಣಂಬೂರು, ಸುರತ್ಕಲ್, ಮುಲ್ಕಿ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.      ಬಜ್ಬೆ, ಪಣಂಬೂರು, ಸುರತ್ಕಲ್, ಮುಲ್ಕಿ ವ್ಯಾಪ್ತಿಯ 4 ಠಾಣೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೆ ಮಂಗಳೂರು ಕಮಿಷನರ್ ಶಶಿಕುಮಾರ್ ಆದೇಶ ನೀಡಿದ್ದಾರೆ.

Share Post