ವಿದ್ಯಾರ್ಥಿನಿ ಜೊತೆ ಚಕ್ಕಂದ; ಕೆಲಸ ಕಳೆದುಕೊಂಡ ಮುಖ್ಯ ಶಿಕ್ಷಕ
ಮೈಸೂರು: ಶಾಲೆಯ ಕೊಠಡಿಯಲ್ಲೇ ವಿದ್ಯಾರ್ಥಿನಿ ಜೊತೆ ಅಸಭ್ಯವಾಗಿ ವರ್ತಿಸಿದ್ದ ಖಾಸಗಿ ಶಾಲಾ ಮುಖ್ಯ ಶಿಕ್ಷಕನನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಇತ್ತೀಚೆಗೆ ಎಚ್.ಡಿ.ಕೋಟೆ ತಾಲ್ಲೂಕಿನ ಖಾಸಗಿ ಶಾಲೆಯೊಂದರಲ್ಲಿ ಮುಖ್ಯ ಶಿಕ್ಷಕನೊಬ್ಬ ಅದೇ ಶಾಲೆಯ ವಿದ್ಯಾರ್ಥಿನಿ ಜೊತೆ ರಾಸಲೀಲೆಯಲ್ಲಿ ತೊಡಗಿದ್ದ. ಈ ದೃಶ್ಯವನ್ನು ವಿದ್ಯಾರ್ಥಿಗಳೇ ಸೆರೆ ಹಿಡಿದು, ಶಿಕ್ಷಣಾಧಿಕಾರಿಗೆ ದೂರು ನೀಡಿದ್ದರು. ಈ ಹಿನ್ನೆಲೆ ಆ ಖಾಸಗಿ ಶಾಲೆಯ ಆಡಳಿತ ಮಂಡಳಿ ತುರ್ತು ಸಭೆಯನ್ನು ನಡೆಸಿ ಮುಖ್ಯಶಿಕ್ಷಕ ಆರ್ ಎಂ ಅನಿಲ್ಕುಮಾರ್ನನ್ನು ಸೇವೆಯಿಂದ ವಜಾಗೊಳಿಸಿ ಆದೇಶಿಸಿದೆ.
ವಿದ್ಯಾರ್ಥಿನಿಯ ಜೊತೆ ಅಸಭ್ಯವಾಗಿ ವರ್ತಿಸಿದ ಮುಖ್ಯಶಿಕ್ಷಕನ ವಿರುದ್ಧ ಈಗಾಗಲೇ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಇದಲ್ಲದೇ, ಪ್ರಕರಣದ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಬಿಇಒ ಚಂದ್ರಕಾಂತ್ ಮತ್ತು ಡಿಡಿಪಿಐ ರಾಮಚಂದ್ರರಾಜೇ ಅರಸ್ ತಿಳಿಸಿದ್ದಾರೆ.