ಹಾಸ್ಟೆಲ್ನಲ್ಲಿ ವಿದ್ಯಾರ್ಥಿನಿಯರಿಗೆ ಕಿರುಕುಳ; ಶಿಕ್ಷಕನಿಗೆ ಧರ್ಮದೇಟು
ಮಂಡ್ಯ; ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡುತ್ತಿದ್ದ ಮುಖ್ಯ ಶಿಕ್ಷಕನಿಗೆ ವಿದ್ಯಾರ್ಥಿನಿಯರೆಲ್ಲಾ ಸೇರಿ ಧರ್ಮದೇಟು ಕೊಟ್ಟಿದ್ದಾರೆ. ಪಾಂಡವಪುರ ತಾಲ್ಲೂಕಿನ ಕಟ್ಟೇರಿ ಗ್ರಾಮದ ವಿದ್ಯಾರ್ಥಿನಿಯರ ನಿಲಯದಲ್ಲಿ ಈ ಘಟನೆ ನಡೆದಿದೆ.
ಪ್ರೌಢಶಾಲೆಯ ಮುಖ್ಯಶಿಕ್ಷಕನಾಗಿರುವ ಚಿನ್ಮಯ ಮೂರ್ತಿಯೇ ಧರ್ಮದೇಟು ತಿಂದ ಶಿಕ್ಷಕ. ಈತನಿಗೆ ವಿದ್ಯಾರ್ಥಿನಿಯರ ವಸತಿ ನಿಲಯದ ಉಸ್ತುವಾರಿ ನೀಡಲಾಗಿತ್ತು. ಹೀಗಾಗಿ ಸಂಜೆ ಸಮಯದಲ್ಲಿ ಹಾಸ್ಟೆಲ್ಗೆ ಬರುತ್ತಿದ್ದ ಆತ, ವಿದ್ಯಾರ್ಥಿನಿಯರನ್ನು ಕೊಠಡಿಗೆ ಕರೆಸಿಕೊಂಡು ಅಸಭ್ಯವಾಗಿ ವರ್ತಿಸುತ್ತಿದ್ದ. ಅಶ್ಲೀಲ ವಿಡಿಯೋಗಳನ್ನು ತೋರಿಸುತ್ತಿದ್ದ. ಅಷ್ಟೇ ಅಲ್ಲ. ವಿದ್ಯಾರ್ಥಿನಿಯರ ಅಂಗಗಳನ್ನು ಮುಟ್ಟುತ್ತಿದ್ದ ಎನ್ನಲಾಗಿದೆ. ಇದ್ರಿಂದ ಬೇಸತ್ತ ವಿದ್ಯಾರ್ಥಿನಿಯರು ಎಲ್ಲರೂ ಒಟ್ಟಾಗಿ ಶಿಕ್ಷಕನಿಗೆ ಧರ್ಮದೇಟು ನೀಡಿದ್ದಾರೆ.
ಕಳೆದ ರಾತ್ರಿ ವಿದ್ಯಾರ್ಥಿನಿಯೊಬ್ಬಳನ್ನು ತನ್ನ ಕೊಠಡಿಗೆ ಕರೆಸಿಕೊಂಡು ಅಸಭ್ಯವಾಗಿ ನಡೆದುಕೊಂಡಿದ್ದಾನೆ. ಇದರಿಂದ ಭಯಗೊಂಡ ವಿದ್ಯಾರ್ಥಿನಿ ಕಿರುಚಿಕೊಂಡಿದ್ದಾಳೆ. ಹೀಗಾಗಿ ಸ್ಥಳಕ್ಕೆ ಆಗಮಿಸಿದ ಇತರೆ ವಿದ್ಯಾರ್ಥಿನಿಯರು ಶಿಕ್ಷಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.