ಪ್ರಾದೇಶಿಕ ಪಕ್ಷದಿಂದ ಬಿಜೆಪಿಗೆ ನಷ್ಟವಿಲ್ಲ; ಸಚಿವ ಶ್ರೀರಾಮುಲು
ಬಳ್ಳಾರಿ; ರಾಜ್ಯದಲ್ಲಿ ಯಾವುದೇ ಪ್ರಾದೇಶಿಕ ಪಕ್ಷ ಬಿಜೆಪಿ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಸಚಿವ ಶ್ರೀರಾಮುಲು ಪರೋಕ್ಷವಾಗಿ ಜನಾರ್ದನ್ ರೆಡ್ಡಿಯ ಹೊಸ ಪಕ್ಷ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ವಿರುದ್ದ ಹೇಳಿಕೆ ನೀಡಿದ್ದಾರೆ.
ಬಳ್ಳಾರಿಯಲ್ಲಿ ಮಾಧ್ಯಮ ಗಳೊಂದಿಗೆ ಮಾತನಾಡಿ ಪ್ರಜಾ ಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಬೇಕಾದ್ರೂ ಪಕ್ಷ ಕಟ್ಟಬಹುದು. ರಾಜ್ಯದಲ್ಲಿ ಜೆಡಿಎಸ್ ಸೇರಿದಂತೆ ಯಾವುದೇ ಪ್ರಾದೇಶಿಕ ಪಕ್ಷ ಉತ್ತರ ಕರ್ನಾಟಕ ಭಾಗದಲ್ಲಿ ಪ್ರಭಾವ ಬೀರುವ ಮಾತೇ ಇಲ್ಲಾ ಎನ್ನುವ ಮೂಲಕ ಪರೋಕ್ಷವಾಗಿ ಜನಾರ್ಧನ್ ರೆಡ್ಡಿಯ ಹೊಸ ಪಕ್ಷ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಬಿಜೆಪಿ ಪಕ್ಷದ ಮೇಲೆ ಪ್ರಭಾವ ಬೀರುವುದಿಲ್ಲ ಎಂದು ಟೀಕಿಸಿದ್ದಾರೆ.
ಹೊಸ ಪ್ರಾದೇಶಿಕ ಪಕ್ಷದಿಂದ ಕಾರ್ಯಕರ್ತರಲ್ಲಿ ಗೊಂದಲ ಇಲ್ಲಾ, ನಮ್ಮ ಕಾರ್ಯಕರ್ತರು ಒಗ್ಗಟ್ಟಾಗಿದ್ದಾರೆ. ಜನರ ಒಲವು ಬಿಜಿಪಿ ಪಕ್ಷದ ಮೇಲಿದೆ ದೇಶದ ಚುನಾವಣೆ ಪ್ರಧಾನಿ ಮೋದಿ ಹಾಗೂ ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರ ನೇತೃತ್ವದಲ್ಲಿ ನಡೆಯಲಿದ್ದು ಸ್ವಂತ ಬಲದಿಂದ ನಾವು (ಬಿಜೆಪಿ) 150 ಸ್ಥಾನ ಗೆಲ್ಲುತ್ತೆವೆ ಎನ್ನುವ ಮೂಲಕ ಪ್ರಾದೇಶಿಕ ಪಕ್ಷದ ಅಗತ್ಯ ಇಲ್ಲಾ ಎಂದಿದ್ದಾರೆ.
ಬಳ್ಳಾರಿ ವಿಜಯನಗರ ಅವಳಿ ಜಿಲ್ಲೆಯ ಮೂರು ಸಾಮಾನ್ಯ ಕ್ಷೇತ್ರದಲ್ಲಿ ಆನಂದ್ ಸಿಂಗ್, ಕರುಣಾಕರ ರೆಡ್ಡಿ, ಸೋಮಶೇಖರ್ ರೆಡ್ಡಿ ಗೆಲ್ಲುತ್ತಾರೆ ಎನ್ನುವ ಮೂಲಕ ಜನಾರ್ದನ್ ರೆಡ್ಡಿ ಬಿಟ್ಟು ಉಳಿದ ರೆಡ್ಡಿ ಸಹೋದರರ ಪರ ಬ್ಯಾಟಿಂಗ್ ನಡೆಸಿದ್ದಾರೆ.