ಕರ್ನಾಟಕ ಬಂದ್ಗೆ ವಿಪಕ್ಷಗಳ ಬೆಂಬಲವೂ ಇದೆ; ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ; ಕಾವೇರಿಗಾಗಿ ನಾಳೆ ನಡೆಯುತ್ತಿರುವ ಬಂದ್ಗೆ ಸಂಘಟನೆಗಳ ಜೊತೆಗೆ ವಿಪಕ್ಷಗಳ ಬೆಂಬಲವೂ ಇದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿರುವ ಅವರು, ಕಾವೇರಿ ವಿವಾದ ಒಂದೇ ಅಲ್ಲ, ಕೃಷ್ಣೆಯ ಹಿತರಕ್ಷಣೆಯನ್ನೂ ಸರ್ಕಾರ ಮಾಡಬೇಕಿದೆ. ಮಾಡದೇ ಹೋದರೆ ನಾವೆಲ್ಲಾ ಒಂದಾಗಿ ಸರ್ಕಾರದ ವಿರುದ್ಧ ಹೋರಾಟ ರೂಪಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.
ಈಗ 3,000 ಕ್ಯೂಸೆಕ್ ನೀರು ಬಿಡುವಂತೆ ಆದೇಶ ಬಂದಿದೆ. ಆದ್ರೆ, 10 ಸಾವಿರ ಕ್ಯೂಸೆಕ್ ನೀರು ಬಿಡಿ ಎಂದಾಗಲೇ ಸುಪ್ರೀಂ ಕೋರ್ಟ್ ಮೊರೆ ಹೋಗಬೇಕಿತ್ತು. ಹಾಗೇನಾದರೂ ಮಾಡಿದ್ದಿದ್ದರೆ, ದೊಡ್ಡ ಪ್ರಮಾಣದ ನೀರು ತಮಿಳುನಾಡಿಗೆ ಹರಿದುಹೋಗುತ್ತಿರಲಿಲ್ಲ ಎಂದು ಬೊಮ್ಮಾಯಿ ಹೇಳಿದ್ದಾರೆ. ತಡವಾಗಿಯಾದರೂ ರಾಜ್ಯ ಸರ್ಕಾರಕ್ಕೆ ಬುದ್ದಿ ಬಂದಿದೆ. ಜನ ಬೀದಿಗಿಳಿದು ಹೋರಾಟ ಮಾಡುವ ಸಂದರ್ಭ ಬಂದಿದೆ ಎಂದು ಇದೇ ವೇಳೆ ಬೊಮ್ಮಾಯಿ ಹೇಳಿದರು.