ಅಲ್ಲಿನವರು ಖರ್ಗೆ ರೀತಿ ಸುಟ್ಟು ಕರಕಲಾಗಿರುತ್ತಾರೆ; ನಾಲಗೆ ಹರಿಬಿಟ್ಟ ಆರಗ
ಶಿವಮೊಗ್ಗ; ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಅರಣ್ಯ ಸಚಿವ ಈಶ್ವರ ಖಂಡ್ರೆ ವಿರುದ್ಧ ನಾಲಗೆ ಹರಿಬಿಟ್ಟಿದ್ದಾರೆ. ತೀರ್ಥಹಳ್ಳಿಯಲ್ಲಿ ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ನಡೆದ ಪ್ರತಿಭಟನೆ ವೇಳೆ, ಮಲ್ಲಿಕಾರ್ಜುನ ಖರ್ಗೆ ಹಾಗೂ ಈಶ್ವರ ಖಂಡ್ರೆ ವಿರುದ್ಧ ಅವಹೇಳಕಾರಿ ಹೇಳಿಕೆ ನೀಡಿದ್ದಾರೆ.
ಅರಣ್ಯವೇ ಇಲ್ಲದ ಪ್ರದೇಶದವರನ್ನು ಅರಣ್ಯ ಸಚಿವರನ್ನಾಗಿ ನೇಮಿಸಲಾಗಿದೆ. ಸಚಿವ ಈಶ್ವರ್ ಖಂಡ್ರೆ ಅವರಿಗೆ ಮರಗಿಡ ಅಂದ್ರೆ ಏನು ಅನ್ನೋದೇ ಗೊತ್ತಿಲ್ಲ. ಖಂಡ್ರೆ ಅವರು ತಲೆಕೂದಲು ಮುಚ್ಚಿಕೊಂಡಿದ್ದರಿಂದ ಉಳಿದುಕೊಂಡಿದಾರೆ, ಅದೇ ಅವರಿಗೆ ನೆರಳು ಎಂದು ಲೇವಡಿ ಮಾಡಿದ್ದಾರೆ. ಅಷ್ಟೇ ಅಲ್ಲದೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆಯೂ ಕೇವಲವಾಗಿ ಮಾತನಾಡಿದ್ದಾರೆ. ಆ ಭಾಗದವರು ಸುಟ್ಟು ಕರಕಲಾಗಿರುತ್ತಾರೆ. ಖರ್ಗೆಯವರನ್ನು ನೋಡಿದರೆ ಸಾಕು ಆ ಭಾಗದ ಜನರ ಸ್ಥಿತಿ ಗೊತ್ತಾಗುತ್ತೆ ಎಂದು ಆರಗ ಜ್ಞಾನೇಂದ್ರ ಹೇಳಿದ್ದಾರೆ. ಇದು ಈಗ ವಿವಾದಕ್ಕೆ ಕಾರಣವಾಗಿದೆ.