CrimeDistricts

ಎಲ್ಲರೆದುರು ಪೊಲೀಸರು ಥಳಿಸಿದರು; ಮನನೊಂದ ವ್ಯಕ್ತಿ ಆತ್ಮಹತ್ಯೆ

ಶಿವಮೊಗ್ಗ; ಪೊಲೀಸರು ಎಲ್ಲರೆದುರು ಥಳಿಸಿದರೆಂಬ ಕಾರಣಕ್ಕೆ ಮನನೊಂದ ವ್ಯಕ್ತಿಯೊಬ್ಬ ನೇಣಿಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಭದ್ರಾವತಿ ತಾಲ್ಲೂಕಿನ ಹೊಳೆಹೊನ್ನೂರು ಗ್ರಾಮದ ಮಂಜುನಾಥ್‌ ಎಂಬ ವ್ಯಕ್ತಿಯೇ ಆತ್ಮಹತ್ಯೆ ಮಾಡಿಕೊಂಡವರು.

ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮಂಜುನಾಥ್‌ಗೆ ಪೊಲೀಸರು ಸಾರ್ವಜನಿಕವಾಗಿ ಥಳಿಸಿದ್ದರು. ಇದರಿಂದ ಮನನೊಂದಿದ್ದ ಮಂಜುನಾಥ್‌, ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ನಡೆದು ಈಗಾಗಲೇ 11 ದಿನಗಳಾಗಿವೆ. ಇದೀಗ ಪ್ರಕರಣ ಬೆಳಕಿಗೆ ಬಂದಿದೆ.

ಹೊಳೆಹೊನ್ನೂರಿನ ಕೆನ್ನೆಕೊಪ್ಪದಲ್ಲಿ ಮಂಜುನಾಥ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತನ ಪತ್ನಿ ಪೊಲೀಸರ ಕಡೆ ಬೆಟ್ಟು ತೋರಿಸಿದ್ದಾರೆ. ಪೊಲೀಸರು ಸಾರ್ವಜನಿಕವಾಗಿ ಹಲ್ಲೆ ಮಾಡಿದ್ದರಿಂದಲೇ ನನ್ನ ಗಂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆಕೆ ದೂರಿದ್ದಾರೆ. ಈ ಸಂಬಂಧ ಹೊಳೆಹೊನ್ನೂರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

Share Post