DistrictsPolitics

ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ

ಬೆಂಗಳೂರು; ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ‌ ಹಾಗೂ ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ‌ ಇಲ್ಲ, ಜಿಲ್ಲೆಯಲ್ಲಿ ಪಕ್ಷದ ಎಲ್ಲಾ ಶಾಸಕರು ಒಗ್ಗಟ್ಟಾಗಿ ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ.

ಮಾಧ್ಯಮದವರ ಪ್ರಶ್ನೆಗೆ ಗುರುವಾರ ಉತ್ತರಿಸಿದ ಸಚಿವರು, ನನಗೆ ಬಹಳ ಒಳ್ಳೆ ಖಾತೆ ಕೊಟ್ಟಿದ್ದಾರೆ. ಉಡುಪಿ ಜಿಲ್ಲಾ ಉಸ್ತುವಾರಿ ವಹಿಸಿದ್ದಾರೆ. ಸತೀಶ ಜಾರಕಿಹೊಳಿ ಅವರು ಆರು ಬಾರಿ ಶಾಸಕರು, ನಾನು ಎರಡು ಬಾರಿ ಶಾಸಕಿಯಾಗಿ, ಮೊದಲ ಬಾರಿ ಸಚಿವೆ ಆಗಿರುವೆ,
ಸತೀಶಣ್ಣ ಬಹಳ ಅನುಭವ ಇರುವವರು, ಅವರ ನೇತೃತ್ವದಲ್ಲಿ ನಾವೆಲ್ಲ ಒಂದಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಸಚಿವರು ತಿಳಿಸಿದರು.

ಜಿಲ್ಲೆಗೆ ಯಾವುದೇ ಅಧಿಕಾರಿಯನ್ನು ಸತೀಶ್ ಜಾರಕಿಹೊಳಿ ಅವರು ಹಾಕಿದಾಗ ನಾನು ಎಸ್ ಎನ್ನುತ್ತೇನೆ. ನಾನು ಯಾವುದೇ ಅಧಿಕಾರಿ ಹಾಕಿದಾಗ ಅವರು ಎಸ್ ಎನ್ನುತ್ತಾರೆ. ಅದೇ ಕಾಂಪ್ರಮೈಸ್ ಅಷ್ಟೇ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ಸಹೋದರ ಚನ್ನರಾಜ್ ಹಟ್ಟಿಹೊಳಿ ಅವರ ಎಂಎಲ್ಸಿ ಚುನಾವಣೆಯಿಂದ ಹಿಡಿದು ಇಲ್ಲಿ ತನಕ ಒಂದೇ ಒಂದು ವಿಚಾರದಲ್ಲೂ ಸತೀಶ್ ಅವರ ಜೊತೆ ಭಿನ್ನಾಭಿಪ್ರಾಯಗಳು ಬಂದಿಲ್ಲ. ನಾನು ಗಟ್ಡಿ ಧ್ಚನಿಯಲ್ಲಿ ಸ್ಪಷ್ಟಪಡಿಸ್ತೇನೆ, ಒಂದೇ ಒಂದು ವಿಚಾರದಲ್ಲೂ ನನ್ನ ಸತೀಶಣ್ಣ ಮಧ್ಯೆ ಭಿನ್ನಾಭಿಪ್ರಾಯ ಇಲ್ಲ ಎಂದು ಸಚಿವರು ಹೇಳಿದರು.

Share Post