CrimeDistricts

ಪೊಲೀಸರ ಮೇಲೇ ಮಾರಣಾಂತಿಕ ದಾಳಿ ನಡೆಸಿದ ಕಳ್ಳರು!

ರಾಯಚೂರು; ಹಿಡಿಯಲು ಹೋದಾಗ ಕಳ್ಳರು ನಡು ರಸ್ತೆಯಲ್ಲೇ ಪೊಲೀಸರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಮಸ್ಕಿ ತಾಲ್ಲೂಕಿನ ಗುಡದೂರು ಕಾಲುವೆ ಬಳಿ ಬಳಗಾನೂರ ಠಾಣೆಯ ಪೊಲೀಸ್​ ಪೇದೆಗಳಾದ ಮಂಜುನಾಥ್​ ಹಾಗೂ ಗೋಪಾಲ್ ಎಂಬುವವರ ಮೇಲೆ ದಾಳಿ ನಡೆಸಲಾಗಿದೆ.

ಕಾಪರ್ ವೈರ್ ಕಳ್ಳತನ ಆರೋಪಿಗಳನ್ನು ಬಂಧಿಸಲು ಪೊಲೀಸರು ತೆರಳಿದ್ದರು. ಈ ವೇಳೆ ಪೊಲೀಸರ ಮೇಲೆಯೇ ದಾಳಿ ನಡೆಸಲಾಗಿದೆ. ತೀವ್ರ ಗಾಯಗೊಂಡಿರುವ ಇಬ್ಬರು ಪೊಲೀಸರನ್ನು ಸಿಂಧನೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆರು ಮಂದಿಯ ವಿರುದ್ಧ ಎಫ್‌ಐಆರ್‌ ದಾಖಲು ಮಾಡಲಾಗಿದೆ. ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಪೊಲೀಸರ ಮೇಲಿನ ದಾಳಿಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅದರ ಆಧಾರದ ಮೇಲೆ ಆರೋಪಿಗಳಿಗಾಗಿ ಹುಡುಕಾಟ ನಡೆದಿದೆ.

Share Post