ಖಾಸಗಿ ಕ್ಷಣಗಳ ಫೋಟೋ ಇಟ್ಟುಕೊಂಡು ಬೆದರಿಕೆ; ಪ್ರಿಯಕರನನ್ನು ಕೊಂದ ವಿವಾಹಿತ ಮಹಿಳೆ!
ಮೈಸೂರು; ವಿವಾಹಿತ ಮಹಿಳೆ ಜೊತೆ ಅಕ್ರಮ ಸಂಬಂಧ ಇಟ್ಟುಕೊಡಿದ್ದ ವ್ಯಕ್ತಿ, ಆಕೆಯ ಜೊತೆಗಿನ ಖಾಸಗಿ ಕ್ಷಣಗಳನ್ನು ಚಿತ್ರೀಕರಣ ಮಾಡಿಕೊಂಡು ಅದನ್ನು ತೋರಿಸಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ.. ಇದರಿಂದ ರೊಚ್ಚಿಗೆದ್ದಿದ್ದ ಆ ಮಹಿಳೆ, ತನ್ನ ಸಹೋದರನ ಜೊತೆ ಸೇರಿ ಆ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾಳೆ.. ಮೈಸೂರಿನ ಎಚ್ಡಿ ಕೋಟೆ ತಾಲೂಕಿನ ಸಿದ್ದಯ್ಯನ ಹುಂಡಿ ಈ ಘಟನೆ ನಡೆದಿದೆ..
ಪ್ರೇಮಾ ಹಾಗೂ ಆಕೆಯ ಸಹೋದರ ಈ ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.. 32 ವರ್ಷದ ವರ್ಷದ ರಾಜೇಶ್ ಎಂಬಾತನೇ ಕೊಲೆಯಾದ ವ್ಯಕ್ತಿಯಾಗಿದ್ದಾನೆ.. ಆರೋಪಿ ಪ್ರೇಮಾ ಎಂಬಾ ಮೈಸೂರಿನ ಕ್ಯಾತಮಾರನಹಳ್ಳಿ ನಿವಾಸಿಯಾಗಿದ್ದಾಳೆ.. ಈಕೆಯನ್ನು 15 ವರ್ಷದ ಹಿಂದೆ ನಂಜನಗೂಡು ತಾಲ್ಲೂಕಿನ ಶ್ರೀರಾಂಪುರಕ್ಕೆ ಮದುವೆ ಮಾಡಿಕೊಡಲಾಗಿತ್ತು.. ಆದ್ರೆ ಅದೇನಾಗಿತ್ತೋ ಏನೋ ತಿಂಗಳ ಹಿಂದೆ ಪ್ರೇಮಾ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದರು.. ಇದಾದ ಮೇಲೆ ಪ್ರೇಮಾ ತನ್ನ ಪತಿಯ ಸ್ನೇಹಿತ ರಾಜೇಶ್ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಳು.. ಆ ರಾಜೇಶ್,
ಖಾಸಗಿ ಕ್ಷಣಗಳ ಫೋಟೋಗಳನ್ನು ಸೋಶಿಯಲ್ ಮೀಡಿಯಾಗಳಲ್ಲಿ ಹಾಕಿ ಮರ್ಯಾದೆ ಕಳೆಯುವುದಾಗಿ ಬೆದರಿಕೆ ಹಾಕಿದ್ದ ಪ್ರಿಯಕರನ್ನು ವಿವಾಹಿತ ಮಹಿಳೆಯೊಬ್ಬಳು ಸಹೋದರನ ಜತೆ ಸೇರಿಕೊಂಡು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಪ್ರಕರಣ ಎಚ್ಡಿ ಕೋಟೆ ತಾಲೂಕಿನ ಸಿದ್ದಯ್ಯನ ಹುಂಡಿ ಬಳಿ ನಡೆದಿದೆ. ಪ್ರೇಮಾ ಹಾಗೂ ಆಕೆಯ ಸಹೋದರ ಶಿವು ಕೊಲೆ ಆರೋಪಿಗಳು. 32 ವರ್ಷದ ರಾಜೇಶ್ ಕೊಲೆಯಾದ ವ್ಯಕ್ತಿ.
ಆರೋಪಿ ಪ್ರೇಮಾ ಮೈಸೂರಿನ ಕ್ಯಾತಮಾರನಹಳ್ಳಿ ನಿವಾಸಿಯಾಗಿದ್ದಾರೆ. ಅವರು 15 ವರ್ಷದ ಹಿಂದೆ ನಂಜನಗೂಡಿನ ಶ್ರೀರಾಂಪುರಕ್ಕೆ ಮದುವೆ ಆಗಿ ಬಂದಿದ್ದರು. ಒಂದು ತಿಂಗಳ ಹಿಂದೆ ಪ್ರೇಮಾಳ ಪತಿ ಆತ್ಮಹತ್ಯೆ. ಮಾಡಿಕೊಂಡಿದ್ದರು. ಆ ಬಳಿಕ ಪ್ರೇಮಾ ಪತಿಯ ಸ್ನೇಹಿತ ರಾಜೇಶ್ ಜತೆ ಪ್ರೀತಿಯಲ್ಲಿ ಬಿದ್ದಿದ್ದಳು. ಅವರಿಬ್ಬರು ಖಾಸಗಿ ಕ್ಷಣಗಳನ್ನೂ ಕಳೆದಿದ್ದರು. ಇದನ್ನೇ ದುರ್ಬಳಕೆ ಮಾಡಿಕೊಂಡಿದ್ದ ರಾಜೇಶ್, ಆ ಕ್ಷಣದ ಫೋಟೋಗಳನ್ನು ತೆಗೆದಿಟ್ಟುಕೊಂಡು ಬೆದರಿಕೆ ಹಾಕಲು ಆರಂಭಿಸಿದ್ದ. ಬೆದರಿದ ಪ್ರೇಮಾ ಆತನ ಜೀವನ ಕೊನೆಗೊಳಿಸಲು ನಿರ್ಧರಿಸಿದ್ದಾಳೆ. ಅಂತೆಯೇ ಆತನನ್ನು ತನ್ನ ಬಳಿಗೆ ಕರೆಸಿಕೊಂಡು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾಳೆ.