CrimeDistricts

ಮಂಡ್ಯ ಜಿಲ್ಲೆಯಲ್ಲಿ ಭೀಕರ ಅಪಘಾತ; ಮೂವರ ದುರ್ಮರಣ

ಮಂಡ್ಯ; ಮಳವಳ್ಳಿ ಪಟ್ಟಣದ ಬಳಿ ಕಾರು ಹಾಗೂ ಆಟೊ ಪರಸ್ಪರ ಡಿಕ್ಕಿಯಾಗಿ ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಆಟೊದಲ್ಲಿದ್ದ ಮೂವರು ಮೃತಪಟ್ಟಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಳವಳ್ಳಿ ಪಟ್ಟಣದ ಹೊರವಲಯ ಕಣಿಗಲ್ ಗೇಟ್ ಬಳಿ ಈ ದುರ್ಘಟನೆ ನಡೆದಿದೆ.

ಬೆಂಗಳೂರು ಮೂಲದ ರವಿಕುಮಾರ್(50), ಭಾಸ್ಕರ್ (48) ಮತ್ತು ಆಟೊ ಚಾಲಕ ಮದ್ದೂರು ತಾಲ್ಲೂಕಿನ ಹುಲಿಗೆರೆ ಗ್ರಾಮದ ಶ್ರೀನಿವಾಸ್ (35) ಮೃತಪಟ್ಟವವರು. ರವಿಕುಮಾರ್ ಜಯ ಕರ್ನಾಟಕ ಜನಪರ ವೇದಿಕೆಯ ರಾಜ್ಯ ಘಟಕದ ಕಾರ್ಯದರ್ಶಿಯಾಗಿದ್ದರು. ಅವರು ತಮ್ಮ ಹುಟ್ಟೂರು ಕಣಿಕಹಳ್ಳಿ ಗ್ರಾಮಕ್ಕೆ ಹೋಗಿದ್ದರು. ನಿನ್ನೆ ಸಂಜೆ ಬೆಂಗಳೂರಿಗೆ ಬರಲು ಆಟೊದಲ್ಲಿ ತೆರಳುತ್ತಿದ್ದರು. ರಾಷ್ಟ್ರೀಯ ಹೆದ್ದಾರಿಯ ಕಣಿಗಲ್ ಬಳಿ ಎದುರಿನಿಂದ ಬಂದ ಕಾರು ಆಟೋಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Share Post