Districts

ಅಗತ್ಯಕ್ಕಿಂತ ಹೆಚ್ಚು ಜನರ ಪ್ರಯಾಣ; ರ್ಯಾಫ್ಟಿಂಗ್‌ ಬೋಟ್‌ ಮುಳುಗಡೆ

ಜೋಯಿಡಾ (ಉತ್ತರ ಕನ್ನಡ): ಇಲ್ಲಿನ ಗಣೇಶಗುಡಿ ಸಮೀಪ ಕಾಳಿ ನದಿಯಲ್ಲಿ ನಿಗದಿಗಿಂತ ಹೆಚ್ಚು ಜನರನ್ನು ಕರೆದೊಯ್ಯುತ್ತಿದ್ದ ರಿವರ್ ರ‍್ಯಾಫ್ಟಿಂಗ್ ಬೋಟ್ ಮುಳುಗಡೆಯಾಗಿದ್ದು, ಅದರಲ್ಲಿದ್ದ ಮಕ್ಕಳೂ ಸೇರಿದಂತೆ 12 ಮಂದಿ ಪ್ರವಾಸಿಗರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಭಸವಾಗಿ ಹರಿಯುತ್ತಿದ್ದ ನದಿಯಲ್ಲಿ ಮುಳುಗುತ್ತಿದ್ದ ಬೋಟ್‍ನ್ನು ಸಮೀಪದಲ್ಲೇ ಇನ್ನೊಂದು ಬೋಟ್‍ನಲ್ಲಿದ್ದ ಪ್ರವಾಸಿಗರು ರಕ್ಷಿಸಿದ್ದಾರೆ. ನೀರಿನಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ಮೇಲಕ್ಕೆತ್ತಿದ್ದಾರೆ. ಪ್ರವಾಸಿಗರನ್ನು ರಕ್ಷಿಸುತ್ತಿರುವ ವಿಡಿಯೊ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ಸಣ್ಣ ರ‍್ಯಾಫ್ಟಿಂಗ್ ಬೋಟ್‍ನಲ್ಲಿ ಗರಿಷ್ಠ 6 ಜನರನ್ನು ಕರೆದೊಯ್ಯಬಹುದಾಗಿದೆ. ಆದರೆ 12 ಜನರನ್ನು ಬೋಟ್‍ನಲ್ಲಿ ಕರೆದೊಯ್ಯಲಾಗಿತ್ತು. ಇದೇ ಅವಘಡಕ್ಕೆ ಕಾರಣ ಎಂದು ಆರೋಪಿಸಲಾಗಿದೆ. ಬೋಟ್ ಮುಳುಗಡೆ ವಿಷಯ ನನ್ನ ಗಮನಕ್ಕೆ ಬಂದಿದೆ. ದೃಶ್ಯಾವಳಿಗಳನ್ನು ಪರಿಶೀಲಿಸಿ ತನಿಖೆ ನಡೆಸಲಾಗುತ್ತಿದೆ. ಆಯೋಜಕರು ಯಾರು ಎಂಬುದನ್ನು ಖಚಿತಪಡಿಸಿಕೊಂಡು ಅವರ ಮೇಲೆ ಪ್ರಕರಣ ದಾಖಲಿಸುತ್ತೇವೆ ಸ್ಥಳೀಐ ಪೊಲೀಸರು ತಿಳಿಸಿದ್ದಾರೆ.

Share Post