DistrictsLifestylePolitics

ಗ್ರಾಮ ಪಂಚಾಯತ್‌ ಅಧ್ಯಕ್ಷರಾಗಿ ತೃತೀಯಲಿಂಗಿ ಅವಿರೋಧ ಆಯ್ಕೆ

ಬಳ್ಳಾರಿ; ಇತ್ತೀಚೆಗೆ ತೃತೀಯಲಿಂಗಿಗಳು ಸಮಾಜದ ಮುಖ್ಯವಾಹಿನಿಗೆ ಬರುತ್ತಿದ್ದಾರೆ. ಕೆಲವೊಂದು ಕಡೆ ಸಮಾಜ ಅವರನ್ನು ಒಪ್ಪಿಕೊಳ್ಳುತ್ತಿದೆ. ಅದರಕ್ಕೆ ಉದಾಹರಣೆಗಳು ನಮ್ಮಲ್ಲಿ ಸಾಕಷ್ಟು ಸಿಗುತ್ತವೆ. ಅದೇ ರೀತಿ ಕಳೆದ ಎರಡು ಅವಧಿಯಿಂದ ಗ್ರಾಮ ಪಂಚಾಯತ್‌ ಸದಸ್ಯೆಯಾಗಿದ್ದ ತೃತೀಯಲಿಂಗಿಯೊಬ್ಬರು ಗ್ರಾಮ ಪಂಚಾಯತ್‌ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ.

ಬಳ್ಳಾರಿ ಜಿಲ್ಲೆ ಸಂಡೂರು ತಾಲ್ಲೂಕಿನ ಚೋರನೂರು ಗ್ರಾಮ ಪಂಚಾಯತ್‌ ಅಧ್ಯಕ್ಷೆಯಾಗಿ ತೃತೀಯಲಿಂಗಿ ಅಂಜಿನಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅವರು ಇದು ಎರಡನೇ ಬಾರಿ ಗ್ರಾಮ ಪಂಚಾಯತ್‌ ಸದಸ್ಯೆಯಾಗಿದ್ದು, ಹಲವು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಬಾರಿ ಪರಿಶಿಷ್ಟ ವರ್ಗದ ಅಭ್ಯರ್ಥಿಗೆ ಅಧ್ಯಕ್ಷ ಸ್ಥಾನ ಮೀಸಲಾಗಿತ್ತು.

ಒಟ್ಟು ಮೂವರು ಅಭ್ಯರ್ಥಿಗಳು ಈ ಸ್ಥಾನಕ್ಕೆ ಆಕಾಂಕ್ಷಿಗಳು ಇದ್ದರು. ಆದ್ರೆ ಗ್ರಾಮಸ್ಥರೆಲ್ಲಾ ಸೇರಿ ಈ ಬಾರಿ ತೃತೀಯಲಿಂಗಿ ಅಂಜಿನಮ್ಮ ಅವರಿಗೆ ಅಧ್ಯಕ್ಷ ನೀಡೋಣ ಎಂದು ತೀರ್ಮಾನಕ್ಕೆ ಬಂದಿದ್ದಾರೆ. ಅದರಂತೆ ಈ ಬಾರಿ ಅಂಜಿನಮ್ಮ ಅವರನ್ನು ಅವಿರೋಧವಾಗಿ ಅಧ್ಯಕ್ಷೆಯಾಗಿ ಆಯ್ಕೆ ಮಾಡಿದ್ದಾರೆ.

 

Share Post