ತ್ರಿಪಲ್ ರೈಡ್; ಬೈಕ್ ಅಪಘಾತದಲ್ಲಿ SSLC ವಿದ್ಯಾರ್ಥಿ ಸಾವು
ತುಮಕೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ತೆರಳುತ್ತಿದ್ದ ವಿದ್ಯಾರ್ಥಿಯೊಬ್ಬ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಅಮೃತ್ತೂರು ಬಳಿ ನಡೆದಿದೆ. ಬೈಕ್‌ನಲ್ಲಿ ಮೂವರು ವಿದ್ಯಾರ್ಥಿಗಳು ತೆರಳುತ್ತಿದ್ದು, ಬೈಕ್ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ನವೀನ್ ಎಂಬ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಇಂದು ಎಸ್‌ಎಸ್‌ಎಲ್‌ಸಿಯ ಗಣಿತ ಪರೀಕ್ಷೆ ಬರೆಯಲು ಮೂವರು ವಿದ್ಯಾರ್ಥಿಗಳು ಅಮೃತ್ತೂರಿಗೆ ತೆರಳುತ್ತಿದ್ದರು. ಜಿನ್ನಾಗರ ಬಳಿ ಬರುತ್ತದ್ದಂತೆ ನಿಯಂತ್ರಣ ತಪ್ಪಿ ಬೈಕ್ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಶರತ್, ದರ್ಶನ್ ಎಂಬುವವರಿಗೆ ತೀವ್ರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಮೃತ್ತೂರು ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.