ಗುಬ್ಬಿಯಲ್ಲಿ ಹಾಡಹಗಲೇ ಡಿಎಸ್ಎಸ್ ಮುಖಂಡನ ಬರ್ಬರ ಹತ್ಯೆ
ತುಮಕೂರು; ದಲಿತ ಸಂಘರ್ಷ ಸಮಿತಿ ಮುಖಂಡ ನರಸಿಂಹಮೂರ್ತಿ (50) ಎಂಬುವರನ್ನು ಮಚ್ಚು, ಲಾಂಗ್ನಿಂದ ಹಲ್ಲೆ ನಡೆಸಿ ಬರ್ಬರ ಕೊಲೆ ಮಾಡಿರುವ ಘಟನೆ ಗುಬ್ಬಿ ಮಟ್ಟಣದಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಗುಬ್ಬಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮುಂಭಾಗದ ಹೆದ್ದಾರಿ ಪಕ್ಕದಲ್ಲಿ ದಾಳಿ ನಡೆಸಿದ ದುಷ್ಕರ್ಮಿಗಳು, ಮಾರಕಾಸ್ತ್ತಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.
ಹೆದ್ದಾರಿ ಪಕ್ಕದಲ್ಲೇ ಸ್ನೇಹಿತರ ಜತೆ ಚಹಾ ಕುಡಿಯುತ್ತ ಕುಳಿತಿದ್ದಾಗ ನರಸಿಂಹಮೂರ್ತಿ ಮೇಲೆ ದಾಳಿ ಮಾಡಿ ಕೊಲೆ ಮಾಡಲಾಗಿದೆ. ಕಾರಿನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಗುಬ್ಬಿ ತಾಲ್ಲೂಕಿನ ಪೆದ್ದನಹಳ್ಳಿಯಲ್ಲಿ ಇತ್ತೀಚೆಗೆ ಪರಿಶಿಷ್ಟ ಸಮುದಾಯಕ್ಕೆ ಸೇರಿದ್ದ ಇಬ್ಬರು ಯುವಕರನ್ನು ಕೊಲೆ ಮಾಡಲಾಗಿತ್ತು. ತಾಲ್ಲೂಕಿನ ಕರಿಶೆಟ್ಟಿ ಹಟ್ಟಿ ಬಳಿ ಎರಡು ವಾರಗಳ ಹಿಂದೆ ವ್ಯಕ್ತಿಯೊಬ್ಬರ ಕೊಲೆ ನಡೆದಿತ್ತು.