CrimeDistricts

ಟ್ರಕ್‌-ಆಟೋ ಮುಖಾಮುಖಿ ಡಿಕ್ಕಿ; ಏಳು ಮಹಿಳೆಯರ ದುರ್ಮರಣ

ಬೀದರ್; ಬೀದರ್‌ ಜಿಲ್ಲೆಯಲ್ಲಿ ಭೀಕರ ಅಪಘಾತ ನಡೆದಿದ್ದು, ಏಳು ಮಹಿಳೆಯರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಟ್ರಕ್‌ ಹಾಗೂ ಆಟೋ ನಡುವೆ ಡಿಕ್ಕಿಯಾಗಿದ್ದು, ಕೂಲಿ ಕೆಲಸ ಮುಗಿಸಿಕೊಂಡು ಮನೆಗೆ ಬರುತ್ತಿದ್ದ ಕಾರ್ಮಿಕ ಮಹಿಳೆಯರು ಸಾವನ್ನಪ್ಪಿದ್ದಾರೆ. ಚಿಟಗುಪ್ಪಾ ತಾಲ್ಲೂಕಿನ ಬೆಮ್ಮಳಖೇಡ ಗ್ರಾಮದ ಬಳಿ ಈ ಘಟನೆ ನಡೆದಿದೆ.

ಟ್ರಕ್‌ ಡಿಕ್ಕಿಯಿಂದಾಗಿ ಆಟೋ ನಜ್ಜುಗುಜ್ಜಾಗಿದೆ. ಅದರಲ್ಲಿದ್ದ ಕಾರ್ಮಿಕ ಮಹಿಳೆಯರಲ್ಲಿ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರು. ಆರು ಮಂದಿಗೆ ತೀವ್ರ ಗಾಯಗಳಾಗಿದ್ದವು. ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇನ್ನೂ ಆರು ಮಂದಿ ಮಹಿಳೆಯರಿಗೆ ಗಾಯಗಳಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಭಾವತಿ (36), ಗುಂಡಮ್ಮ (52), ಯಾದಮ್ಮ (40), ರುಕ್ಮಿಣಿ (60), ಜಕ್ಕಮ್ಮ (32) ಮೃತಪಟ್ಟ ಕಾರ್ಮಿಕ ಮಹಿಳೆಯರು. ಮೃತರು ಹಾಗೂ ಗಾಯಾಳುಗಳೆಲ್ಲರೂ ಉಡುಬಾಳು ಗ್ರಾಮದವರು ಎಂದು ತಿಳಿದುಬಂದಿದ್ದು, ಕೂಲಿ ಕೆಲಸಕ್ಕೆ ತೆರಳಿದ್ದರು ಎಂದು ತಿಳಿದುಬಂದಿದೆ.

Share Post