CrimeDistricts

ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ನೀರು ಪಾಲು

ವಿಜಯಪುರ; ಬಟ್ಟೆ ತೊಳೆಯುತ್ತಿದ್ದ ಸಂದರ್ಭದಲ್ಲಿ ಕಾಲು ಜಾರಿ ಬಿದ್ದು, ಇಬ್ಬರು ಕಾಲುವೆಗೆ ಆಹುತಿಯಾಗಿರುವ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲ್ಲೂಕಿನ ಹಡಲಗೇರಿ ಬಳಿ ನಡೆದಿದೆ.

ಇಲ್ಲಿನ ಕೆ.ಬಿ.ಜೆ.ಎನ್.ಎಲ್ ಕಾಲುವೆಯಲ್ಲಿ ರಸೂಲ್ ಮಾಲದಾರ (25) ಹಾಗೂ ಸಮಿವುಲ್ಲಾ ಗೊಳಸಂಗಿ (10) ಬಟ್ಟೆ ತೊಳೆಯಲು ಹೋಗಿದ್ದರು. ಈ ವೇಳೆ ಈ ದರ್ಘಟನೆ ನಡೆದಿದೆ. ಮೃತರು ಬಾಗಲಕೋಟೆ ಜಿಲ್ಲೆ ರಬಕವಿ-ಬನಹಟ್ಟಿ ತಾಲೂಕಿನ ಚಿಮ್ಮಡ ಗ್ರಾಮದವರು ಎಂದು ತಿಳಿದುಬಂದಿದೆ.

ಮೃತರಿಬ್ಬರೂ ಕೂಲಿ ಕಾರ್ಮಿಕರು. ಚಿಕನ್ ಸೆಂಟರ್‌ ಒಂದರಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಬಿಡುವಿನ ವೇಳೆಯಲ್ಲಿ ಅವರು ಕಾಲುವೆಯಲ್ಲಿ ಬಟ್ಟೆ ತೊಳೆಯಲು ಬಂದಿದ್ದರು. ಈ ವೇಳೆ ಕಾಲು ಜಾರಿಬಿದ್ದು, ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

Share Post