CrimeDistricts

ಎರಡು ಪ್ರತ್ಯೇಕ ಅಪಘಾತ – ಮೈ ಜುಂ ಎನಿಸುವ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆ

ತುಮಕೂರು; ಎರಡು ಪ್ರತ್ಯೇಕ ಭೀಕರ ಅಪಘಾತದಲ್ಲಿ ಐವರು ಆಶ್ಚರ್ಯಕರ ರೀತಿಯಲ್ಲಿ ಪ್ರಾಣಪಾಯದಿಂದ ಪಾರಾದ ಘಟನೆ ಕುಣಿಗಲ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ಅಂಚೇಪಾಳ್ಯ ಸಮೀಪ ನಡೆದಿದೆ.

ಈ ಎರಡೂ ಅಪಘಾತ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು ಮೈ ಜುಂ ಎನಿಸುವಂತಿದೆ. ಮೊದಲ ಪ್ರಕರಣದಲ್ಲಿ ಮನು ಎಂಬ ಯುವಕ ಕೆಲಸದ ನಿಮತ್ತ ಬೈಕ್‌ನಲ್ಲಿ ಅಂಚೇಪಾಳ್ಯಕ್ಕೆ ಬಂದು ಹೋಟೆಲ್ ಮುಂಭಾದದ ರಸ್ತೆ ಬದಿಯಲ್ಲಿ ಬೈಕ್ ಮೇಲೆ ಕುಳಿತುಕೊಂಡಿದ್ದ. ಈ ವೇಳೆ ಹಾಸನ ಕಡೆಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ರಸ್ತೆಯ ಎಡ ಬದಿಗೆ ಅತಿ ವೇಗವಾಗಿ ನುಗ್ಗಿತು, ಇದನ್ನು ಗಮನಿಸಿದ ಮನು ಕ್ಷರ್ಣಾದದಲ್ಲಿ ಬೈಕ್ ಬಿಟ್ಟು ಓಡಿ ಹೋಗಿದ್ದಾನೆ.

ಕ್ಯಾಂಟರ್ ಬೈಕ್ ಮೇಲೆ ಹರಿದು ಬೈಕ್ ಸಂಪೂರ್ಣ ನಜ್ಜು ನುಜ್ಜಾಯಿತು, ಮನು ಎಚ್ಚರಗೊಳ್ಳದಿದ್ದಲ್ಲಿ ಆತನ ಸಾವು ಕಟ್ಟಿಟ್ಟ ಬುತ್ತಿಯಾಗಿತ್ತು. ಕ್ಷಣಾರ್ಧಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾನೆ.

ಮತ್ತೊಂದು ಘಟನೆಯಲ್ಲಿ ಬೆಂಗಳೂರಿನಿಂದ ಕುಣಿಗಲ್ ತಾಲೂಕಿನ ಅಮೃತೂರಿಗೆ ಹೋಗುತಿದ್ದ ಇನ್ನೋವಾ ಕಾರು ಪಲ್ಟಿಯಾಗಿದೆ. ರಸ್ತೆ ಮೇಲಿನ ಹಂಪ್ಸ್ ಅರಿಯೇ ಚಾಲಕ ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ ಇನ್ನೋವಾ ಕಾರು ಹೋಟೆಲ್ ಮುಂದೆ ನಿಂತಿದ್ದ ಸ್ಕಾರ್ಪಿಯೋಗೆ ಡಿಕ್ಕಿ ಹೊಡೆದು ಪಲ್ಟಿಹೊಡೆದಿದೆ. ಕಾರಿನಲ್ಲಿದ್ದ ನಾಲ್ವರು ಅದೃಷ್ಟವಶಾತ್ ಬಚಾವ್ ಆಗಿದ್ದಾರೆ. ಈ ದೃಶ್ಯ ಕೂಡ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು ಮೈ ಜುಂ ಎನಿಸುವಂತಿದೆ.

Share Post