DistrictsPolitics

ಉಡುಪಿ ಕಾಲೇಜು ಪ್ರಕರಣ; ಎಸ್‌ಐಟಿ ತನಿಖೆ ಇಲ್ಲ ಎಂದ ಸಿಎಂ

ಮಂಗಳೂರು; ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ಚಿತ್ರೀಕರಣ ಪ್ರಕರಣವನ್ನು ಎಸ್‌ಐಟಿ ತನಿಖೆಗೆ ವಹಿಸುವ ಪ್ರಶ್ನೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಡಿವೈಎಸ್‌ಪಿ ಮಟ್ಟದ ಅಧಿಕಾರಿಗಳು ತನಿಖೆಗೆ ನಡೆಸುತ್ತಾರೆ. ಹೀಗಾಗಿ ಎಸ್‌ಐಟಿಗೆ ವಹಿಸುವುದಿಲ್ಲ ಎಂದು ಅವರು ಹೇಳಿದರು.

ಕೇಂದ್ರ ಮಹಿಳಾ ಆಯೋಗದ ಸದಸ್ಯರು ಸ್ಥಳ ಪರಿಶೀಲನೆ ಮಾಡಿದ್ದಾರೆ. ಶೌಚಾಲಯದಲ್ಲಿ ಕ್ಯಾಮೆರಾ ಇಟ್ಟಿಲ್ಲ ಎಂದು ಅವರೇ ಹೇಳಿದ್ದಾರೆ. ತನಿಖೆ ನಡೆಯುತ್ತಿದೆ, ನಡೆಯಲಿ. ವರದಿ ಬಂದ ಮೇಲೆ ಏನು ಕ್ರಮ ಕೈಗೊಳ್ಳಬೇಕೋ ಅದು ಆಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

 

Share Post