DistrictsPolitics

ಉಡುಪಿ ಮಠದ ಜಾಗ ಮುಸ್ಲಿಂ ರಾಜರು ಕೊಟ್ಟಿದ್ದು; ಕಾಂಗ್ರೆಸ್‌ ನಾಯಕ ಮಿಥುನ್‌ ರೈ ವಿವಾದ

ಉಡುಪಿ; ಉಡುಪಿ ಶ್ರೀಕೃಷ್ಣ ಮಠಕ್ಕೆ ಜಾಗ ಕೊಟ್ಟಿದ್ದು ಮುಸ್ಲಿಂ ರಾಜರು ಎಂದು ಹೇಳುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್‌ ಯುವ ಮುಖಂಡ ಮಿಥುನ್‌ ರೈ ವಿವಾದವನ್ನು ತಮ್ಮ ಮೇಲೆ ಎಳೆದುಕೊಂಡಿದ್ದಾರೆ. ಮಿಥುನ್‌ ರೈ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಹಿಂದೂಗಳ ಕ್ಷಮೆಯಾಚಿಸುವಂತೆ ಆಗ್ರಹಿಸಲಾಗುತ್ತಿದೆ.

ಇನ್ನೊಂದೆಡೆ ಬಿಜೆಪಿ ಶಾಸಕ ರಘುಪತಿ ಭಟ್‌ ಅವರು ಮಿಥುನ್‌ ರೈ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕೃಷ್ಣ ಮಠಕ್ಕಾಗಲೀ, ಅನಂತೇಶ್ವರಕ್ಕಾಗಿ ಮುಸ್ಲಿಂ ರಾಜರು ಜಾಗವನ್ನು ನೀಡಿಲ್ಲ. ಅನಂತೇಶ್ವರಕ್ಕೆ ರಾಮಭೋಜನರು ಜಾಗ ನೀಡಿದ ಉಲ್ಲೇಖ ಇದೆ. ಮುಂದೆ ಆ ಭೂಮಿಯೇ ಕೃಷ್ಣ ಮಠಕ್ಕೆ ಬಳಕೆಯಾಗಿದೆ ಎಂದು ಹೇಳಿದ್ದಾರೆ. ಇನ್ನೊಂದೆಡೆ ಶ್ರೀರಾಮ ಸೇಮೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಕೂಡಾ ಮಿಥುನ್‌ ರೈ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಕೃಷಣ ಮಠಕ್ಕೆ 800 ವರ್ಷಗಳ ಇತಿಹಾಸವಿದೆ. ಮಿಥುನ್‌ ರೈ ಜನರ ದಾರಿ ತಪ್ಪಿಸುತ್ತಿದ್ದಾರೆ. ಹಿಂದೂಗಳಿಗೆ ಅವಮಾನ ಮಾಡಿದ್ದಾರೆ. ಅವರು ಹಿಂದೂಗಳ ಕ್ಷಮೆಯಾಚಿಸಬೇಕು ಅಂತ ಆಗ್ರಹಿಸಿದ್ದಾರೆ.

ಇತ್ತ ಮಿಥುನ್‌ ರೈ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಪತ್ರಿಕೆಗಳಲ್ಲಿ ಈ ಬಗ್ಗೆ ವರದಿಯಾಗಿತ್ತು. ಆ ವರದಿಗಳ ಆಧಾರದ ಮೇಲೆ ನಾನು ಮಾತನಾಡಿದ್ದೇನೆ ಎಂದು ಹೇಳಿದ್ದಾರೆ.

Share Post