ಉಡುಪಿ ವಿಡಿಯೋ ಚಿತ್ರೀಕರಣ ಪ್ರಕರಣ; ವಿದ್ಯಾರ್ಥಿನಿಯರಿಗೆ ನಿರೀಕ್ಷಣಾ ಜಾಮೀನು
ಉಡುಪಿ; ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ಚಿತ್ರೀಕರಣ ಮಾಡಿದ ಪ್ರಕರಣದ ಸಂಬಂಧ ಬಂಧನದ ಭೀತಿ ಎದುರಿಸುತ್ತಿದ್ದ ಮೂವರು ವಿದ್ಯಾರ್ಥಿನಿಯರಿಗೆ ನಿರೀಕ್ಷಣಾ ಜಾಮೀನು ಸಿಕ್ಕಿದೆ. ಉಡುಪಿ ಜಿಲ್ಲಾ ನ್ಯಾಯಾಲಯ ಮೂವರೂ ವಿದ್ಯಾರ್ಥಿನಿಯರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
ಘಟನೆಯ ಬಗ್ಗೆ ಪ್ರತಿಭಟನೆಗಳು ಹೆಚ್ಚಾದ ನಂತರ ಪೊಲೀಸರು ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದರು. ಹೀಗಾಗಿ ವಿದ್ಯಾರ್ಥಿನಿಯರು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಹಾಕಿದ್ದರು. ಇಂದು ಅವರು ಕೋರ್ಟ್ ಮುಂದೆ ಹಾಜರಾಗಿದ್ದರು. ಕೋರ್ಟ್ ಮೂವರೂ ವಿದ್ಯಾರ್ಥಿನಿಯರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದು, ತನಿಖೆಗೆ ಸಹಕರಿಸುವಂತೆ ಸೂಚಿಸಿದೆ.