ಉತ್ತರ ಕನ್ನಡದಲ್ಲಿ ಹೆಚ್ಚಿದ ಮಳೆ ಆರ್ಭಟ; 3 ತಾಲ್ಲೂಕುಗಳಲ್ಲಿ ಕಾಳಜಿ ಕೇಂದ್ರ ಸ್ಥಾಪನೆ
ಕಾರವಾರ; ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಹೆಚ್ಚಾಗುತ್ತಲೇ ಇದೆ. ಇದ್ರಿಂದಾಗಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ದಾವಣಗೆರೆ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಅದ್ರಲ್ಲೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದೇ ವಾರದಲ್ಲಿ 4960 ಮಿಲಿ ಮೀಟರ್ ಮಳೆಯಾಗಿದೆ. ಇದ್ರಿಂದಾಗಿ ಸಾಕಷ್ಟ ಅವಾಂತರ ಉಂಟಾಗಿದೆ. ಹಲವಾರು ತಗ್ಗು ಪ್ರದೇಶಗಳಿಗೆ ನೀರುನುಗ್ಗಿದೆ. ನೂರಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಮೂರು ತಾಲ್ಲೂಕುಗಳಲ್ಲಿ ಕಾಳಜಿ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗಿದೆ. ಪ್ರವಾಹದಿಂದ ಮನೆ ಮಠ ಕಳೆದುಕೊಂಡವರು ಕಾರವಾರ, ಕುಮಟಾ ಹಾಗೂ ಹೊನ್ನಾವರ ತಾಲೂಕುಗಳಲ್ಲಿ ತೆರೆದಿರುವ ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಇದುವರೆಗೆ ಮಳೆಗೆ ಓರ್ವ ಸಾವನ್ನಪ್ಪಿದ್ದು, ಎರಡು ಜಾನುವಾರುಗಳು ಅಸು ನೀಗಿವೆ.