CrimeDistricts

ಕಾಲೇಜು ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ವಿಚಾರ; ಎಫ್‌ಐಆರ್‌ ದಾಖಲು

ಉಡುಪಿ; ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ಚಿತ್ರೀಕರಣ ಮಾಡಿದ ಪ್ರಕರಣ ಸಂಬಂಧ ಪೊಲೀಸರು ಸ್ವಯಂ ಪ್ರೇರಿತ ಕೇಸ್‌ ದಾಖಲಿಸಿಕೊಂಡಿದ್ದಾರೆ. ಉಡುಪಿಯ ನೇತ್ರ ಜ್ಯೋತಿ ಪ್ಯಾರಾ ಮೆಡಿಕಲ್‌ ಕಾಲೇಜು ಹಾಗೂ ಮೂವರು ವಿದ್ಯಾರ್ಥಿನಿಯರ ವಿರುದ್ಧ ಎಫ್‌ಐಆರ್‌ ದಾಖಲು ಮಾಡಲಾಗಿದೆ. ಕಾಲೇಜು ವಿರುದ್ಧ ಐಪಿಸಿ ಸೆಕ್ಷನ್ 509 (ಮಹಿಳೆಯನ್ನು ಅವಮಾನಿಸುವ ಉದ್ದೇಶದಿಂದ ಮಾಡಿರುವ ಕೃತ್ಯ, 204 (ಅರಿವಿಗೆ ಬಾರದಂತೆ ವಿಡಿಯೋ ಮಾಡುವ ಕೃತ್ಯ), ಜೊತೆಗೆ ದಾಖಲೆ ನಾಶ ವಿಚಾರ, ಸಾಕ್ಷ್ಯ ನಾಶ, 175 (ಉದ್ದೇಶ ಪೂರ್ವಕವಾಗಿ ಸೂಕ್ತ ದಾಖಲೆ ನೀಡದಿರುವುದು) ಕೇಸ್‌ ದಾಖಲಾಗಿದೆ.

ವಿಡಿಯೋ ಚಿತ್ರೀಕರಣದಿಂದ ವಿದ್ಯಾರ್ಥಿನಿಯ ಖಾಸಗಿತನಕ್ಕೆ ಧಕ್ಕೆ ಆಗಿದೆ. ಆದ್ರೆ ವಿಷಯ ಗೊತ್ತಾಗುತ್ತಿದ್ದಂತೆ ವಿಡಿಯೋ ಡಿಲೀಟ್‌ ಮಾಡಲಾಗಿದೆ ಎಂದು ಕಾಲೇಜಿನ ಆಡಳಿತ ಮಂಡಳಿಯವರು ಹೇಳುತ್ತಿದ್ದಾರೆ. ಇದೊಂದು ಗಂಭೀರ ಪ್ರಕರಣವಾದ್ದರಿಂದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಜುಲೈ 18ರಂದು ವಿದ್ಯಾರ್ಥಿನಿಯರು ತಮಾಷೆಗಾಗಿ ಶೌಚಾಲಯಕ್ಕೆ ಹೋದ ವಿದ್ಯಾರ್ಥಿನಿಯೊಬ್ಬಳ ವಿಡಿಯೋ ಮಾಡಲು ಹೋಗಿದ್ದಾರೆ. ಈ ವೇಳೆ ಆಕಸ್ಮಿಕವಾಗಿ ಬೇರೊಬ್ಬ ವಿದ್ಯಾರ್ಥಿನಿಯ ವಿಡಿಯೋ ಮಾಡಿ ಸಿಕ್ಕಿಬಿದ್ದಿದ್ದಾರೆ ಎನ್ನಲಾಗಿದೆ.

 

Share Post