ವಿಜಯಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನ ಅಂಗವಾಗಿ ವಿಜಯಪುರದಲ್ಲಿ ವಾಜಪೇಯಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಈ ವೇಳೆ ಸಚಿವರಾದ ಗೋವಿಂದ ಎಂ ಕಾರಜೋಳ, ಆರ್.ಅಶೋಕ, ವಿ.ಸೋಮಣ್ಣ, ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಎಂ.ಬಿ. ಪಾಟೀಲ್ ಉಪಸ್ಥಿತರಿದ್ದರು.