DistrictsPolitics

ವಿಜಯೇಂದ್ರ ನಾಮಪತ್ರ ಸಲ್ಲಿಕೆ; ಭಾರಿ ಬಹುಮತದಿಂದ ಗೆಲ್ಲಿಸಿ ಎಂದ ಬಿಎಸ್‌ವೈ

ಶಿಕಾರಿಪುರ; ಯಡಿಯೂರಪ್ಪ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ. ಹೀಗಾಗಿ ಅವರ ಪುತ್ರ ವಿಜಯೇಂದ್ರ ಈ ಬಾರಿ ಶಿಕಾರಿಪುರ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಇಂದು ಅವರು ನಾಮಪತ್ರ ಸಲ್ಲಿಕೆ ಮಾಡಿದರು. ಇದಕ್ಕೂ ಬೃಹತ್‌ ರೋಡ್‌ ಶೋ ಹಾಗೂ ಸಮಾವೇಶ ನಡೆಸಲಾಯಿತು. ಈ ವೇಳೆ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ವಿಜಯೇಂದ್ರ ಅವರಿಗೆ ಶಿಕಾರಿಪುರ ಕ್ಷೇತ್ರದಲ್ಲಿ ಶೇ.೭೦ರಷ್ಟು ಮತಗಳನ್ನು ನೀಡಿ ಗೆಲ್ಲಿಸಬೇಕೆಂದು ಮತದಾರರಲ್ಲಿ ಮನವಿ ಮಾಡಿದರು.

ಭಾರತದ ಸರ್ವಾಂಗೀಣ ಅಣಿವೃದ್ಧಿಗೆ ಬಿಜೆಪಿ ಬದ್ಧವಾಗಿದೆ, ಕರ್ನಾಟಕದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ. ಬಿಜೆಪಿ ಈ ಬಾರಿ 130 ಕ್ಷೇತ್ರಗಳಲ್ಲಿ ಗೆಲ್ಲಲಿದೆ. ಈ ಮೂಲಕ ಬಿಜೆಪಿ ಅಧಿಕಾರಕ್ಕೆ ಬರೋದು ಸೂರ್ಯ ಚಂದ್ರರಷ್ಟೇ ಸತ್ಯ ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಶಿಕಾರಿಪುರದಲ್ಲಿ ನಾನು ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ಮೊದಲಿನಿಂದಲೂ ನೀವು ನನ್ನನ್ನು ಗೆಲ್ಲಿಸುತ್ತಲೇ ಬಂದಿದ್ದೀರಿ. ವಿಜಯೇಂದ್ರ ಅವರನ್ನೂ ಗೆಲ್ಲಿಸಿ ಎಂದು ಮನವಿ ಮಾಡಿದರು.

ಇದೇ ವೇಳೆ ಮಾತನಾಡಿದ ವಿಜಯೇಂದ್ರ ಅವರು, ತಂದೆಯ ಏಳುಬೀಳು, ಆಡಳಿತ ನೋಡಿದ್ದೇನೆ. ನಾನೂ ರೈತರ ಪರವಾಗಿ ಕೆಲಸ ಮಾಡುತ್ತೇನೆ. ನಾನು ಸ್ಪರ್ಧೆ ಮಾಡಬೇಕೆಂದು ಕ್ಷೇತ್ರದ ಜನರೇ ಕೇಳಿದ್ದರು. ಈ ಕಾರಣಕ್ಕಾಗಿ ಹೈಕಮಾಂಡ್‌ ನನಗೆ ಟಿಕೆಟ್‌ ನೀಡಿದೆ. ಗೆದ್ದರೆ ನಾನು ಇನ್ನಷ್ಟು ಅಭಿವೃದ್ಧಿಕಾರ್ಯಗಳನ್ನು ಮಾಡುತ್ತೇನೆ ಎಂದು ವಿಜಯೇಂದ್ರ ಹೇಳಿದ್ದಾರೆ.

ಇದಕ್ಕಾಗಿ ಮೊದಲ ವಿಜಯೇಂದ್ರ ಅವರು, ಮನೆಯಲ್ಲಿ ತಂದೆ ಯಡಿಯರಪ್ಪ ಅವರ ಆಶೀರ್ವಾದ ಪಡೆದರು. ಅನಂತರ ಮನೆಯ ಮಹಿಳೆಯರು ವಿಜಯೇಂದ್ರಗೆ ಆರತಿ ಬೆಳಗಿ ಶುಭ ಕೋರಿದರು.

Share Post