DistrictsPolitics

ಮುಂದಿನ ಚುನಾವಣೆಯಲ್ಲಿ ವಿಜಯೇಂದ್ರ ಸ್ಪರ್ಧಿಸ್ತಾರೆ.. ಆದರೆ..; ಯಡಿಯೂರಪ್ಪ

ತುಮಕೂರು; ಮುಂದಿನ ಚುನಾವಣೆಯಲ್ಲಿ ವಿಜಯೇಂದ್ರ ಸ್ಪರ್ಧೆ ಮಾಡೋದು ಖಚಿತ. ಆದರೆ ಕ್ಷೇತ್ರ ಇನ್ನೂ ತೀರ್ಮಾನವಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, ವಿಜಯೇಂದ್ರ ಅವರನ್ನು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಸಲಾಗುವುದು ಎಂದು ತಿಳಿಸಿದರು.
ಮುಂದಿನ ಚುನಾವಣೆಯಲ್ಲಿ ಬಿಜೆಪಿ ಕನಿಷ್ಠ 140 ಸ್ಥಾನಗಳನ್ನು ಗೆಲ್ಲಲಿದೆ. ಪಕ್ಷವನ್ನು ಅಧಿಕಾರಕ್ಕೆ ತರುವುದು ನನ್ನ ಗುರಿ. ಅದಕ್ಕಾಗಿಯೇ ನಾನು ರಾಜ್ಯ ಪ್ರವಾಸ ಕೈಗೊಳ್ಳುತ್ತಿದ್ದೇನೆ ಎಂದು ಯಡಿಯೂರಪ್ಪ ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ. ಚುನಾವಣೆ ಹತ್ತಿರದಲ್ಲಿರುವಾಗ ಅನೇಕರು ನಮ್ಮ ಪಕ್ಷಕ್ಕೆ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ. ಪಕ್ಷಕ್ಕೆ ಬರುತ್ತೇನೆ ಅನ್ನುವವರನ್ನು ಬೇಡ ಎನ್ನಲು ಆಗುವುದಿಲ್ಲ. ಎಲ್ಲರಿಗೂ ಮುಕ್ತ ಆಹ್ವಾನವಿದೆ ಎಂದು ಯಡಿಯೂರಪ್ಪ ಹೇಳಿದರು.

Share Post