DistrictsPolitics

ಸಿಎಂ ವಿರುದ್ಧ ವಿನಯ್‌ ಕುಲಕರ್ಣ ನಿಲ್ಲಲ್ಲ; ಸಿದ್ದರಾಮಯ್ಯ

ಹಳಿಯಾಳ; ಶಿಗ್ಗಾಂವಿ ಕ್ಷೇತ್ರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸ್ಪರ್ಧೆ ಮಾಡೋದಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಹಳಿಯಾಳದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಶಿಗ್ಗಾಂವಿಯಲ್ಲಿ ವಿನಯ್‌ ಕುಲಕರ್ಣಿ ಸ್ಪರ್ಧೆ ಮಾಡಬೇಕೆಂಬ ಒತ್ತಡ ಇತ್ತು. ಆದ್ರೆ ವಿನಯ್‌ ಕುಲಕರ್ಣಿಗೆ ಈಗಾಗಲೇ ಟಿಕೆಟ್‌ ಘೋಷಣೆಯಾಗಿದೆ. ಶಿಗ್ಗಾಂವಿಯಿಂದ ಅಲ್ಪಸಂಖ್ಯಾತ ಅಭ್ಯರ್ಥಿ ಸ್ಪರ್ಧೆ ಮಾಡಲಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್‌ ಮೂರನೇ ಪಟ್ಟಿ ರಿಲೀಸ್‌ ಆಗಬೇಕಿದೆ. ಆ ಪಟ್ಟಿ ಅಂತಿಮಗೊಳಿಸಲು ಪ್ರಕ್ರಿಯೆ ನಡೆಯುತ್ತಿದೆ. ಇಂದು ಅಥವಾ ನಾಳೆ ಕಾಂಗ್ರೆಸ್‌ ಮೂರನೇ ಪಟ್ಟಿ ರಿಲೀಸ್‌ ಆಗಲಿದೆ ಎಂದು ಸಿದ್ದರಾಮಯ್ಯ ಇದೇ ವೇಳೆ ತಿಳಿಸಿದರು.

Share Post