ಕೆಆರ್‌ಎಸ್ ಬ್ಯಾಕ್ ವಾಟರ್‌ನಲ್ಲಿ ನಡೆದದ್ದು ರೇವ್ ಪಾರ್ಟಿನಾ..?
ಮೈಸೂರು; ಮೈಸೂರಿನಲ್ಲಿ ದಸರಾ ಉತ್ಸವಕ್ಕೆ ಸಿದ್ಧತೆಗಳು ನಡೆದಿವೆ.. ಹೀಗಿರುವಾಗಲೇ ಮೈಸೂರಿನ ಹೊರವಲಯದಲ್ಲಿ ರೇವ್ ಪಾರ್ಟಿ ಆಯೋಜನೆ ಮಾಡಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.. ಕೆಆರ್‌ಎಸ್ ಬ್ಯಾಕ್ ವಾಟರ್ ಬಳಿ ತಡರಾತ್ರಿಯವರೆಗೂ ಪಾರ್ಟಿ ನಡೆದಿದೆ ಎಂದು ತಿಳಿದುಬಂದಿದ್ದು, ಈ ಬಗ್ಗೆ ಪೊಲೀಸರಿಗೂ ಮಾಹಿತಿ ರವಾನೆಯಾಗಿದೆ.
ಮಾಹಿತಿ ಗೊತ್ತಾಗುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.. ಈ ವೇಳೆ ಕೆಲವರು ತಪ್ಪಿಸಿಕೊಂಡು ಓಡಿದ್ದು, ಕೆಲವರು ಪೊಲೀಸರ ಮೇಲೆಯೇ ಹಲ್ಲೆ ಮಾಡಿದ್ದಾರೆ ಎನ್ನಲಾಗುತ್ತಿದೆ.. ಸುಮಾರು 50ಕ್ಕೂ ಹೆಚ್ಚು ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.. ಅಲ್ಲೇನು ನಡೆಯುತ್ತಿತ್ತು ಎಂಬುದರ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ.. ಎಫ್‌ಎಸ್‌ಎಲ್ ತಜ್ಞರು ಕೂಡಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ..
ಹೆಚ್ಚುವರಿ ಎಸ್.ಪಿ.ನಾಗೇಶ್ ಹಾಗೂ ಡಿವೈಎಸ್ಪಿ ಕರೀಂ ನೇತೃತ್ವದಲ್ಲಿ ಈ ದಾಳಿ ನಡೆದಿದೆ..
ಪಾರ್ಟಿಯಲ್ಲಿ 150ಕ್ಕೂ ಹೆಚ್ಚು ಯುವಕರು ಭಾಗಿಯಾಗಿದ್ದರು ಎನ್ನಲಾಗಿದೆ.. ಈ ಪಾರ್ಟಿಗೆ ಇಸ್ರೇಲ್‌ನಿಂದ ರ್ಯಾಪರ್ ಒಬ್ಬನನ್ನು ಕರೆಸಿದ್ದರು ಎನ್ನಲಾಗಿದೆ.. ಆಯೋಜಕರು ಈ ಪಾರ್ಟಿಯಲ್ಲಿ ಭಾಗವಹಿಸಲು ಒಬ್ಬರಿಗೆ ಎರಡು ಸಾವಿರ ರೂಪಾಯಿ ಫಿಕ್ಸ್ ಮಾಡಿದ್ದರು ಎಂದು ತಿಳಿದುಬಂದಿದೆ.. ಸ್ಥಳದಲ್ಲಿ ಯಾವುದೇ ಮಾದಕ ದ್ರವ್ಯ, ಮಾದಕ ವಸ್ತು ಸಿಕ್ಕಿಲ್ಲ.. ಆದ್ರೆ ಪಾರ್ಟಿಯಲ್ಲಿ ಡ್ರಗ್ಸ್, ಮದ್ಯ ಬಳಕೆಯಾಗಿತ್ತೇ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ..