Districts

ರಾಜ್ಯದ ಹವಾಮಾನ ವರದಿ: 28-11-2021

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವವಿದೆ. ರಾಜ್ಯದಲ್ಲಿ ಚಳಿ ಇದ್ದು, ಮೋಡ ಕವಿದ ವಾತಾವರಣ ಮುಂದುವರಿಯುತ್ತೆ. ಇನ್ನೂ 2 ದಿನಗಳ ಕಾಲ ಚಡಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಎಚ್ಚರಿಸಿದ್ದಾರೆ.

ನವೆಂಬರ್ 29ರವರೆಗೂ ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ. ಹಲವೆಡೆ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಗರಿಷ್ಟ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕಾರವಾರ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ.

 

Share Post