DistrictsPolitics

ಡಿಸಿಎಂ ಸ್ಥಾನ ತಗೊಂಡು ಏನಾಗ್ಬೇಕು, ಸಿಎಂ ಸ್ಥಾನ ಬೇಕು; ಶಾಮನೂರು ಶಿವಶಂಕರಪ್ಪ

ದಾವಣಗೆರೆ; ಸಚಿವ ಕೆ.ಎನ್‌.ರಾಜಣ್ಣ ಅವರು ಮೂವರು ಡಿಸಿಎಂಗಳ ಬಗ್ಗೆ ಹೇಳಿಕೆ ನೀಡಿದ ಮೇಲೆ ಕಾಂಗ್ರೆಸ್‌ನಲ್ಲಿ ಈ ವಿಚಾರದಲ್ಲಿ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈ ನಡುವೆ ಕಾಂಗ್ರೆಸ್‌ನ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿರುವ ಅವರು, ಡಿಸಿಎಂ ಸ್ಥಾನ ತಗೊಂಡು ಏನು ಮಾಡೋದಕ್ಕೆ ಆಗುತ್ತೆ. ಲಿಂಗಾಯತಿಗೆ ಸಿಗೋದಾದರೆ ಸಿಎಂ ಸ್ಥಾನವೇ ಸಿಗಬೇಕು ಎಂದು ಅವರು ಹೇಳಿದ್ದಾರೆ.

ಇನ್ನು ಸಿಎಂ ಸಿದ್ದರಾಮಯ್ಯ ವಿರುದ್ಧ ಕೂಡಾ ಶಾಮನೂರು ಶಿವಶಂಕರಪ್ಪ ನೇರವಾಗಿ ಆರೋಪ ಮಾಡಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಲಿಂಗಾಯತ ನಾಯಕರನ್ನು ಮೂಲೆಗುಂಪು ಮಾಡಲಾಗಿದೆ. ಯಾರಿಗೂ ಸರಿಯಾದ ಸ್ಥಾನಮಾನ ಸಿಕ್ಕಿಲ್ಲ. ಇನ್ನು ಲಿಂಗಾಯತ ಅಧಿಕಾರಿಗಳಿಗೆ ಪ್ರಮುಖ ಹುದ್ದೆಗಳು ಸಿಕ್ಕಿಲ್ಲ ಎಂದು ಶಾಮನೂರು ಶಿವಶಂಕರಪ್ಪ ಅಸಮಾಧಾನ ಹೊರಹಾಕಿದ್ದಾರೆ.

ನಿಜಲಿಂಗಪ್ಪ, ಜೆ.ಎಚ್.ಪಟೇಲರು ಇದ್ದಾಗ ಲಿಂಗಾಯತ ನಾಯಕರಿಗೆ ಒಳ್ಳೆ ಪ್ರಾತಿನಿದ್ಯ ಸಿಕ್ಕಿತ್ತು. ಆದ್ರೆ ಈಗ ನಮ್ಮ ನಾಯಕರು ಕಂಗಾಲಾಗಿದ್ದಾರೆ.  ಸರ್ಕಾರದ ಆಯಕಟ್ಟಿನ ಪ್ರಮುಖ ಹುದ್ದೆಗಳು ಲಿಂಗಾಯತ ಸಮುದಾಯಕ್ಕೆ ಸಿಕ್ಕಿಲ್ಲ ಎಂದು ಆರೋಪ ಮಾಡಿದ್ದಾರೆ.

 

Share Post