DistrictsPolitics

‌ಶಿಕಾರಿಪುರದಲ್ಲಿ ಸ್ಪರ್ಧೆ ವಿಚಾರ; ಪಕ್ಷ ತೀರ್ಮಾನಿಸುತ್ತೆ ಎಂದ ವಿಜಯೇಂದ್ರ

ಶಿಕಾರಿಪುರ; ಶಿಕಾರಿಪುರದಲ್ಲಿ ನಾನು ಸ್ಪರ್ಧೆ ಮಾಡಬೇಕೆಂದು ಕಾರ್ಯಕರ್ತರು ಒತ್ತಡ ಹೇರುತ್ತಿದ್ದಾರೆ. ಆದ್ರೆ ಈ ಬಗ್ಗೆ ಪಕ್ಷ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಶಿಕಾರಿಪುರದಲ್ಲಿ ಸುದ್ದಿಘೋಷ್ಠಿ ನಡೆಸಿದ ಅವರು, ತಾಲ್ಲೂಕಿನ ಮುಖಂಡರು ಹಾಗೂ ಕಾರ್ಯಕರ್ತರು ನಾನೇ ಅಭ್ಯರ್ಥಿ ಆಗಬೇಕೆಂದು ಬಯಸುತ್ತಿದ್ದಾರೆ ಎಂದು ಹೇಳಿದರು.

ಕಾರ್ಯಕರ್ತರು ಹಾಗೂ ಮುಖಂಡರ ಒತ್ತಡಕ್ಕೆ ಮಣಿದು ಯಡಿಯೂರಪ್ಪ ಅವರು ವಿಜಯೇಂದ್ರ ಶಿಕಾರಿಪುರ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಾನೆ ಎಂದು ಹೇಳಿದ್ದಾರೆ. ಆದ್ರೆ ಅಂತಿಮವಾಗಿ ಪಕ್ಷ ಈ ಬಗ್ಗೆ ನಿರ್ಧಾರ ಮಾಡುತ್ತದೆ ಎಂದು ವಿಜಯೇಂದ್ರ ಹೇಳಿದ್ರು. ನಾನು ಕ್ಷೇತ್ರದ ಅಭ್ಯರ್ಥಿಯಾಗಬೇಕೆಂಬ ಕಾರಣಕ್ಕಾಗಿ ಪ್ರವಾಸ ಮಾಡುತ್ತಿಲ್ಲ. ಈ ಹಿಂದೆಯೂ ನಾನು ಕ್ಷೇತ್ರದಲ್ಲಿ ಪ್ರವಾಸ ಮಾಡಿದ್ದೇನೆ. ಈಗಲೂ ಪ್ರವಾಸ ಮಾಡುತ್ತಿದ್ದೇನೆ ಎಂದು ವಿಜಯೇಂದ್ರ ಇದೇ ವೇಳೆ ಹೇಳಿದ್ದಾರೆ.

Share Post